Home ಟಾಪ್ ಸುದ್ದಿಗಳು ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಅಪರಾಧಿಗಳನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಆದೇಶ

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಅಪರಾಧಿಗಳನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಆರು ಅಪರಾಧಿಗಳನ್ನು ಅವಧಿ ಪೂರ್ವ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ.

ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರನ್ನು ಒಳಗೊಂಡ ಪೀಠವು ಮೇ 17 ರಂದು ನೀಡಿದ ನಿರ್ದೇಶನದ ಮೇರೆಗೆ ಈ ಆದೇಶವನ್ನು ಹೊರಡಿಸಿದೆ.

ನಳಿನಿ ಶ್ರೀಹರ್, ಜಯಕುಮಾರ್, ಆರ್ ಪಿ ರವಿಚಂದ್ರನ್, ರಾಬರ್ಟ್ ಪಿಯಾಸ್, ಸುತೇಂದ್ರರಾಜ ಮತ್ತು ಶ್ರೀಹರನ್  ಅವರನ್ನು ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿದೆ.

ನಳಿನಿ ಸೇರಿದಂತೆ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದು, 23 ವರ್ಷದಿಂದ ಜೈಲಿನಲ್ಲಿದ್ದರು. ಅವರು, ಅವಧಿಪೂರ್ವ ಬಿಡುಗಡೆ ಮಾಡುವಂತೆ ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

Join Whatsapp
Exit mobile version