ಕನ್ವರ್ ಯಾತ್ರೆ ನಡೆಸದಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಆದೇಶ

Prasthutha|

ಕೊರೊನಾ ಸಾಂಕ್ರಾಮಿಕದ ಮಧ್ಯೆ ಕನ್ವರ್ ಯಾತ್ರೆ ನಡೆಸದಂತೆ ತಡೆ ನೀಡಿರುವ ಸುಪ್ರೀಂಕೋರ್ಟ್, ಉತ್ತರ ಪ್ರದೇಶ ಸರ್ಕಾರ ತನ್ನ ನಿರ್ಧಾರವನ್ನು ಮುಂದುವರಿಸುವಂತಿಲ್ಲ ಎಂದು ಶುಕ್ರವಾರ ಆದೇಶಿಸಿದೆ.

- Advertisement -

ನ್ಯಾಯಮೂರ್ತಿ ಆರ್.ಎಫ್.ನಾರಿಮನ್ ನೇತೃತ್ವದ ನ್ಯಾಯಪೀಠವು ಭೌತಿಕ ಯಾತ್ರೆಗಳಿಗೆ ಅವಕಾಶ ನೀಡುವ ನಿರ್ಧಾರವನ್ನು ಮರುಪರಿಶೀಲಿಸಿ ಸೋಮವಾರ ನ್ಯಾಯಾಲಯಕ್ಕೆ ಈ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.
ಒಂದೋ ನಾವು ನೇರವಾಗಿ ಆದೇಶ ನೀಡುತ್ತೇವೆ, ಅಥವಾ ನಿಮ್ಮ ನಿರ್ಧಾರವನ್ನು ಮರುಪರಿಶೀಲಿಸಲು ಇನ್ನೂ ಒಂದು ಅವಕಾಶವನ್ನು ನೀಡುತ್ತೇವೆ “ಎಂದು ನ್ಯಾಯಮೂರ್ತಿ ನಾರಿಮನ್ ಅವರು ಉತ್ತರಪ್ರದೇಶ ಸರ್ಕಾರದ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ಎಸ್.ವೈದ್ಯನಾಥನ್ ಅವರಿಗೆ ಮೌಖಿಕವಾಗಿ ತಿಳಿಸಿದರು.

ಜುಲೈ 25 ರಿಂದ ಕನಿಷ್ಠ ಜನರನ್ನು ಸೇರಿಸಿಕೊಂಡು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ನಡೆಸಬಹುದೆಂದು ಮಂಗಳವಾರ ಯುಪಿ ಸರ್ಕಾರ ತಿಳಿಸಿತ್ತು. ಮಾತ್ರವಲ್ಲದೇ ಭಾಗವಹಿಸುವ ಯಾತ್ರಾರ್ಥಿಗಳಿಗೆ ಅಗತ್ಯವಿದ್ದಲ್ಲಿ ಕೋವಿಡ್ ಪರೀಕ್ಷಾ ವರದಿಯನ್ನು ಕಡ್ಡಾಯಗೊಳಿಸಬಹುದೆಂದು ರಾಜ್ಯ ಸರ್ಕಾರದ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದರು.
ಈ ಹಿಂದೆ ಕುಂಭಮೇಳ ನಡೆಸಿದ ನಿಟ್ಟಿನಲ್ಲಿ ಉತ್ತರಾಖಂಡ ಸರ್ಕಾರ ಸಾರ್ವಜನಿಕವಾಗಿ ಭಾರೀ ಟೀಕೆಗೊಳಗಾಗಿತ್ತು. ಮಾತ್ರವಲ್ಲ ಕೇಂದ್ರ ಆರೋಗ್ಯ ಇಲಾಖೆ ಯಾತ್ರೆಯನ್ನು ರದ್ದುಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಗೆ ಪತ್ರ ಬರೆದಿತ್ತು. ಇದಾದ ಗಂಟೆಗಳ ನಂತರ ಉತ್ತರಾಖಂಡ ಸರ್ಕಾರವು ತನ್ನ ವ್ಯಾಪ್ತಿಯಲ್ಲಿ ಕನ್ವರ್ ಯಾತ್ರೆಯನ್ನು ರದ್ದುಗೊಳಿಸಿದೆ. ಮಾತ್ರವಲ್ಲದೆ ತನ್ನ ನಿರ್ಧಾರವನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಅವರು ಹರಿದ್ವಾರವನ್ನು ಸಾಂಕ್ರಾಮಿಕ ಕೇಂದ್ರವನ್ನಾಗಿ ಮಾಡಲು ನಾವು ಬಯಸುವುದಿಲ್ಲ. “ ದೇವರುಗಳು ಜನರು ಸಾಯುವುದನ್ನು ಬಯಸುವುದಿಲ್ಲವೆಂದು” ಈ ಸಂದರ್ಭದಲ್ಲಿ ಉಲ್ಲೇಖಿಸಿದರು.

Join Whatsapp