ಯುಎಪಿಎ ಕಾಯ್ದೆಯನ್ನು ದುರುಪಯೋಗ ಪಡಿಸದಂತೆ ಸುಪ್ರೀಮ್ ಕೋರ್ಟ್ ತಾಕೀತು

Prasthutha|

ನವದೆಹಲಿ: ದೇಶದಲ್ಲಿ ಚಾಲ್ತಿಯಲ್ಲಿರುವ ಯುಎಪಿಎ ಎಂಬ ಭಯೋತ್ಪಾದನಾ ವಿರೋಧಿ ಕಾಯ್ದೆಯನ್ನು ಅಮಾಯಕರ ವಿರುದ್ಧ ಕ್ಷುಲ್ಲಕ ವಿಚಾರಕ್ಕೆ ಪ್ರಯೋಗಿಸಿ ಕಾಯ್ದೆಯನ್ನು ದುರುಪಯೋಗ ಪಡಿಸದಂತೆ ತನಿಖಾ ಸಂಸ್ಥೆಗಳಿಗೆ ಸುಪ್ರೀಮ್ ಕೋರ್ಟ್ ತಾಕೀತು ಮಾಡಿದೆ.

- Advertisement -

ಯುಎಪಿಎ ಕಾಯ್ದೆ ಅಡಿಯಲ್ಲಿ ಬಂಧಿತ ಕೇರಳ ಮೂಲದ ವಿದ್ಯಾರ್ಥಿಗಳಾದ ತ್ವಾಹಾ ಫಝಲ್ ಮತ್ತು ಅಲ್ಲನ್ ಶುಹೈಬ್ ಅವರಿಗೆ ಜಾಮೀನು ಮಂಜೂರು ಮಾಡುವಾಗ ಸುಪ್ರೀಮ್ ಕೋರ್ಟ್ ಈ ಮೇಲಿನಂತೆ ಪ್ರತಿಕಿಯಿಸಿದೆ.

ಈ ಹಿಂದೆ ಇಬ್ಬರು ವಿದ್ಯಾರ್ಥಿಗಳನ್ನು ಭಯೋತ್ಪಾದನೆಯ ಆರೋಪದಲ್ಲಿ ಕೇಂದ್ರ ತನಿಖಾ ಸಂಸ್ಥೆ (ಎನ್.ಐ.ಎ) ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಇವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಮ್ ಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

- Advertisement -

ಮಾತ್ರವಲ್ಲ ಯುಎಪಿಎ ಕಾಯ್ದೆ ಅಡಿಯಲ್ಲಿ ಬಂಧಿತ ಆರೋಪಿಗಳಿಗೆ ಭಯೋತ್ಪಾದನಾ ಸಂಘಟನೆಯೊಂದಿಗೆ ಸಂಬಂಧದ ಕುರಿತು ಪ್ರಾಥಮಿಕ ಸಾಕ್ಷಿಯಿದ್ದರೂ, ನಾಗರಿಕರ ಸ್ವಾತಂತ್ರ್ಯವನ್ನು ನಿರಾಕರಿಸದ ರೀತಿಯಲ್ಲಿ ಕ್ರಮ ಜರುಗಿಸುವಂತೆ ತನಿಖಾ ಸಂಸ್ಥೆಗಳಿಗೆ ಸುಪ್ರೀಮ್ ಕೋರ್ಟ್ ಸೂಚಿಸಿದೆ.

Join Whatsapp