ಸಿಎಎ ಜಾರಿಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ !

Prasthutha|

►ಮೂರು ವಾರಗಳಲ್ಲಿ ಉತ್ತರಿಸುವಂತೆ ಕೇಂದ್ರಕ್ಕೆ ಸೂಚನೆ

ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯಿದೆಗೆ ತಡೆ ಹೇರಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಕಾಯಿದೆ ಜಾರಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯಿಸಲು ಕೇಂದ್ರ ಸರ್ಕಾರಕ್ಕೆ ಮೂರು ವಾರಗಳ ಕಾಲಾವಕಾಶ ನೀಡಿದೆ.

- Advertisement -


ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಜಸ್ಟೀಸ್ ಜೆಬಿ ಪರಿದ್ವಾಲ್, ಮನೋಜ್ ಮಿಶ್ರಾ ಸೇರಿದ ಪೀಠ ಈ ಅರ್ಜಿಗಳ ವಿಚಾರಣೆ ನಡೆಸಿದೆ. ಏಪ್ರಿಲ್ 8ರೊಳಗೆ ಕೇಂದ್ರ ಸರ್ಕಾರಕ್ಕೆ ಈ ಕುರಿತು ಉತ್ತರ ಸಲ್ಲಿಕೆ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಬಳಿಕ ಮುಂದಿನ ವಿಚಾರಣೆಯನ್ನು ಎಪ್ರಿಲ್ 9ಕ್ಕೆ ಮುಂದೂಡಿದೆ.


ಕಾನೂನು ಜಾರಿಗೆ ತಡೆ ಹೇರಬೇಕು, ಈ ಕಾನೂನು ಮುಸ್ಲಿಂ ಸಮುದಾಯದ ವಿರುದ್ಧ ತಾರತಮ್ಯಕಾರಿ ಧೋರಣೆ ಹೊಂದಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

Join Whatsapp
Exit mobile version