ನೀಟ್ ಪಿಜಿ ಪರೀಕ್ಷೆ ಮುಂದೂಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

Prasthutha|

ನವದೆಹಲಿ: ಮೇ 21 ರಂದು ನಡೆಯಬೇಕಾಗಿದ್ದ ಸ್ನಾತಕೋತ್ತರ ಪರೀಕ್ಷೆಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ- ನೀಟ್ ಅನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಮ್ ಕೋರ್ಟ್ ಇಂದು ವಜಾಗೊಳಿಸಿದೆ.

- Advertisement -

ನೀಟ್ ಪಿಜ್ ಸಿಇಟಿ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸುಪ್ರೀಮ್ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, ಈ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ, ನೀಟ್ ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಲು ಸಾಧ್ಯವಿಲ್ಲ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿದೆ.

ಇದರೊಂದಿಗೆ ನೀಟ್ ಪಿಜಿ ಪರೀಕ್ಷೆಗಳು ಈ ಹಿಂದೆ ನಿಗದಿಪಡಿಸಿದಂತೆ ಮೇ 21 ರಂದು ನಡೆಯುವುದು ಬಹುತೇಕ ಖಚಿತವಾಗಿದೆ.

Join Whatsapp