ಶಾಹಿನ್ ಬಾಗ್ ಕಟ್ಟಡ ತೆರವು ವಿರುದ್ಧದ ಮನವಿಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್

Prasthutha|

ನವದೆಹಲಿ: ದಕ್ಷಿಣ ದೆಹಲಿಯ ಶಾಹಿನ್ ಬಾಗ್ ಪ್ರದೇಶದಲ್ಲಿನ ಕಟ್ಟಡ ತೆರವು ಕಾರ್ಯಾಚರಣೆ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

- Advertisement -

ದೆಹಲಿಯ ಶಾಹೀನ್ ಬಾಗ್ ನಲ್ಲಿನ ಕಟ್ಟಡ ತೆರವು ಕಾರ್ಯಾಚರಣೆ ಕುರಿತು ಸಿಪಿಐ(ಎಂ) ಸಲ್ಲಿಸಿದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಮತ್ತು ದೆಹಲಿ ಹೈಕೋರ್ಟ್ ಸಂಪರ್ಕಿಸಲು ಅರ್ಜಿದಾರರಿಗೆ ಸೂಚಿಸಿದೆ.

ಇದಕ್ಕೂ ಮೊದಲು, ಎಸ್ ಡಿಎಂಸಿ ಅಧಿಕಾರಿಗಳು ಬುಲ್ಡೋಜರ್ ಗಳೊಂದಿಗೆ ಸ್ಥಳಕ್ಕೆ ತಲುಪಿದ ಕೂಡಲೇ ಮಹಿಳೆಯರು ಸೇರಿದಂತೆ ನೂರಾರು ಜನರು ಧರಣಿ ಆರಂಭಿಸಿದ ನಂತರ ಆ ಪ್ರದೇಶದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದರಿಂದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಬೇಕಾಯಿತು.

Join Whatsapp