ತ್ರಿಪುರಾ ಹಿಂಸಾಚಾರ: ಪತ್ರಕರ್ತ, ವಕೀಲರಿಗೆ ರಿಲೀಫ್ ನೀಡಿದ ಸುಪ್ರೀಮ್ ಕೋರ್ಟ್

Prasthutha|

ನವದೆಹಲಿ: ತ್ರಿಪುರಾ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪತ್ರಕರ್ತರ ವಿರುದ್ಧ ಪೊಲೀಸರು ದಾಖಲಿಸಿದ್ದ ಯುಎಪಿಎ ಕಾಯ್ದೆ ಅಡಿಯಲ್ಲಿ ಯಾವುದೇ ಕ್ರಮ ಜರುಗಿಸದಂತೆ ಸುಪ್ರೀಮ್ ಕೋರ್ಟ್ ಪೊಲೀಸರಿಗೆ ಸೂಚಿಸುವ ಮೂಲಕ ಶ್ಯಾಮ್ ಮೀರ್ ಸಿಂಗ್, ವಕೀಲರಾದ ಅನ್ಸಾರ್ ಇಂದೋರಿ ಮತ್ತು ಮುಖೇಶ್ ಅವರಿಗೆ ರಿಲೀಫ್ ನೀಡಿದೆ.

- Advertisement -

ಮಾತ್ರವಲ್ಲ ಈ ಸಂಬಂಧ ಸುಪ್ರೀಮ್ ಕೋರ್ಟ್ ತ್ರಿಪುರಾ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಕಳೆದ ತಿಂಗಳು ತ್ರಿಪುರಾ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಇವರ ವಿರುದ್ಧ ಪೊಲೀಸರು ಯುಎಪಿಎ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

- Advertisement -

ತ್ರಿಪುರಾ ಹಿಂಸಾಚಾರದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳ ವಿರುದ್ಧ ಯುಎಪಿಎ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದ ಪೊಲೀಸರ ನಡೆಯನ್ನು ಪ್ರಶ್ನಿಸಿ ಸುಪ್ರೀಮ್ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು.



Join Whatsapp