ನವದೆಹಲಿ: 6 ರಿಂದ 12 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ಗಳನ್ನು ನೀಡಲು ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಜಯಾ ಠಾಕೂರ್ ಎಂಬುವವರು ವಕೀಲರಾದ ವರೀಂದರ್ ಕುಮಾರ್ ಶರ್ಮಾ ಮತ್ತು ವರುಣ್ ಠಾಕೂರ್ ಮೂಲಕ ಈ ಮನವಿಯನ್ನು ಸಲ್ಲಿಸಿದ್ದಾರೆ.
ಬಡತನದ ಹಿನ್ನೆಲೆಯಿರುವ 11 ರಿಂದ 18 ವರ್ಷದೊಳಗಿನ ಹದಿಹರೆಯದ ಬಾಲಕಿಯರು ಸ್ಯಾನಿಟರಿ ಪ್ಯಾಡ್ ಕೊರತೆಯ ತೀವ್ರ ತೊಂದರೆ ಎದುರಿಸುತ್ತಿದ್ದಾರೆ ಎಂದು ಅರ್ಜಿದಾರರು ಉಲ್ಲೇಖಿಸಿದ್ದಾರೆ.