ಪೋಕ್ಸೋ ಕಾಯ್ದೆ: ಚರ್ಮದಿಂದ ಚರ್ಮಕ್ಕೆ ಸ್ಪರ್ಶ ಅದೇಶವನ್ನು ರದ್ದುಗೊಳಿಸಿದ ಸುಪ್ರೀಮ್ ಕೋರ್ಟ್

Prasthutha|

ನವದೆಹಲಿ: ಪೋಕ್ಸೋ ಕಾಯ್ದೆ ಅಡಿಯಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಲು ಚರ್ಮದಿಂದ ಚರ್ಮಕ್ಕೆ ಸಂಪರ್ಕವಾಗಿರಬೇಕು ಎಂಬ ಬಾಂಬೆ ಹೈಕೋರ್ಟ್ ನ ತೀರ್ಪನ್ನು ಸುಪ್ರೀಮ್ ಕೋರ್ಟ್ ಗುರುವಾರ ವಜಾಗೊಳಿಸಿದೆ. ಮಾತ್ರವಲ್ಲ ಇದು ಕಾನೂನಿಗೆ ಸಂಕುಚಿತ ಮತ್ತು ಅಸಂಬದ್ಧ ವ್ಯಾಖ್ಯಾನ ನೀಡಿದಂತಾಗುತ್ತದೆ ಎಂದು ತಿಳಿಸಿದೆ.

- Advertisement -

ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳನ್ನು ರಕ್ಷಿಸುವ ಪೋಕ್ಸೋ ಕಾಯ್ದೆಯಲ್ಲಿ ಉಲ್ಲೇಖಿಸಿರುವಂತೆ ಚರ್ಮದಿಂದ ಚರ್ಮಕ್ಕೆ ಸಂಪರ್ಕ ಇಲ್ಲದೆ ಕೇವಲ ಮೌಖಿಕ ರೀತಿಯ ಸ್ಪರ್ಶವನ್ನು ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ನೀಡಿದ ತೀರ್ಪನ್ನು ಸುಪ್ರೀಮ್ ಕೋರ್ಟ್ ವಜಾಗೊಳಿಸಿದೆ.

ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಮ್ ಕೋರ್ಟ್ ನ ನ್ಯಾಯಾಮೂರ್ತಿಗಳಾದ ಯು.ಯು ಲಲಿತ್, ಎಸ್. ರವೀಂದ್ರ ಭಟ್ ಮತ್ತು ಎಂ. ತ್ರಿವೇದಿ ಅವರನ್ನೊಳಗೊಂಡ ಪೀಠವು ಅಪರಾಧಿಯು ಕಾನೂನಿನ ಚೌಕಟ್ಟಿನಿಂದ ತಪ್ಪಿಸಿದಂತಾಗಿದೆ ಎಂದು ಅರ್ಥೈಸಲು ಸಾಧ್ಯವಿಲ್ಲ ಎಂದು ಸುಪ್ರೀಮ್ ಕೋರ್ಟ್ ತಿಳಿಸಿದೆ.

- Advertisement -

ನ್ಯಾಯಮೂರ್ತಿ ಬೇಲಾ ತ್ರಿವೇದಿ, ಪೋಕ್ಸೊ ಕಾಯ್ದೆ ಸೆಕ್ಷನ್ 7 ರ ಅಡಿಯಲ್ಲಿ ಚರ್ಮದಿಂದ ಚರ್ಮಕ್ಕೆ ಸ್ಪರ್ಶ ಅಥವಾ ದೈಹಿಕ ಸಂಪರ್ಕವನ್ನು ನಿರ್ಬಂಧಿಸುತ್ತದೆ. ಮಾತ್ರವಲ್ಲ ಅಂತಹ ಉಲ್ಲೇಖವನ್ನು ಪೋಕ್ಸೋ ಕಾಯ್ದೆಯಲ್ಲಿ ಅಳವಡಿಸಿದರೂ ದೌರ್ಜನ್ಯಕೋರರು ಗ್ಲೌಸ್ ಅಥವಾ ಇನ್ನಿತರ ಯಾವುದೇ ವಸ್ತುಗಳನ್ನು ಹಾಕಿಕೊಂಡು ಲೈಂಗಿಕ ದೌರ್ಜನ್ಯವೆಸಗಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಅನುವು ಮಾಡಿದಂತಾದಂತಾಗುತ್ತದೆ ಎಂದು ತಿಳಿಸಿದರು.

Join Whatsapp