ದೇಶದ ಹೆಸರನ್ನು ರಾಜಕೀಯಕ್ಕೆ ಬಳಸುವ ಪಕ್ಷಗಳನ್ನು ಸುಪ್ರೀಂ ಕೋರ್ಟ್ ನಿಷೇಧಿಸಲಿ: ಮಾಯಾವತಿ

Prasthutha|

ಲಕ್ನೋ: ದೇಶದ ಹೆಸರನ್ನು ರಾಜಕೀಯಕ್ಕೆ ಬಳಸುವ ಪಕ್ಷಗಳನ್ನು ಸುಪ್ರೀಂ ಕೋರ್ಟ್ ನಿಷೇಧ ಮಾಡಬೇಕೆಂದು ಬಿಎಸ್ಪಿನಾಯಕಿ ಮಾಯಾವತಿ ಒತ್ತಾಯಿಸಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಇಂಡಿಯಾ ಎಂದು ಮೈತ್ರಿಕೂಟವನ್ನು ಹೆಸರಿಸುವುದರ ವಿರುದ್ಧ ಸುಪ್ರೀಂ ಕೋರ್ಟ್ ಗೆ ಹೋಗಬೇಕಿತ್ತು ಅಥವಾ ಕಾನೂನನ್ನು ತರುವ ಮೂಲಕ ನಾಮಕರಣವನ್ನು ನಿಷೇಧಿಸಬೇಕಿತ್ತು ಎಂದು ಅವರು ಹೇಳಿದ್ದಾರೆ.


ಇದು ಆಡಳಿತ ಮತ್ತು ಪ್ರತಿಪಕ್ಷಗಳು ಸೇರಿ ಮಾಡುತ್ತಿರುವ ವ್ಯವಸ್ಥಿತ ಪಿತೂರಿ. ಮೈತ್ರಿಕೂಟಕ್ಕೆ ಇಂಡಿಯಾ ಎಂದು ನಾಮಕರಣ ಮಾಡಿ ವಿಪಕ್ಷಗಳೇ ಆಡಳಿತ ಪಕ್ಷಕ್ಕೆಸಂವಿಧಾನ ತಿದ್ದುಪಡಿಗೆ ಅವಕಾಶ ನೀಡಿವೆ ಎಂದರು.

Join Whatsapp