ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧಕ್ಕೆ ಸುಪ್ರೀಂ ಕೋರ್ಟ್ ತಡೆ

Prasthutha|

ಹೊಸದಿಲ್ಲಿ: ಕಪೋಲಕಲ್ಪಿತ ಸಿನಿಮಾ ‘ದಿ ಕೇರಳ ಸ್ಟೋರಿ’ ಗೆ ನಿಷೇಧ ಹೇರಿದ್ದ ಪಶ್ಚಿಮ ಬಂಗಾಲ ಸರ್ಕಾರದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಇದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ ಉಂಟುಮಾಡಿದೆ. ತಮಿಳುನಾಡಿನಲ್ಲಿಯೂ ಚಿತ್ರಮಂದಿರಗಳಿಗೆ ಸೂಕ್ತ ಭದ್ರತೆ ಒದಗಿಸಿ ಸಿನಿಮಾ ಪ್ರದರ್ಶನ ಮಾಡುವಂತೆ ಕೂಡ ಸುಪ್ರೀಂಕೋರ್ಟ್ ಗುರುವಾರ ಸೂಚಿಸಿದೆ.

- Advertisement -


ಸಂಸ್ಕೃತಿ ಮತ್ತು ಭಾವನೆಗಳಿಗೆ ವಾಕ್ ಸ್ವಾತಂತ್ರ್ಯವನ್ನು ತರಲು ಸಾಧ್ಯವಿಲ್ಲ ಎಂದು ಈ ವೇಳೆ ನ್ಯಾಯಾಲಯ ತಿಳಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಜೆಬಿ ಪರ್ಡಿವಾಲಾ ಅವರನ್ನು ಒಳಗೊಂಡ ನ್ಯಾಯಪೀಠವು ಮುಂದಿನ ವಿಚಾರಣೆಯನ್ನು ಜುಲೈ ತಿಂಗಳಿಗೆ ಮುಂದೂಡಿದೆ.

Join Whatsapp