Home ಟಾಪ್ ಸುದ್ದಿಗಳು ಉತ್ತರ ಪ್ರದೇಶದ ಲಖಿಂಪುರದಲ್ಲಿ ರೈತರ ಹತ್ಯೆ : ಸುಪ್ರೀಂ ಕೋರ್ಟ್ ನಲ್ಲಿ ಸ್ವಯಂಪ್ರೇರಿತ ದಾವೆ ದಾಖಲು

ಉತ್ತರ ಪ್ರದೇಶದ ಲಖಿಂಪುರದಲ್ಲಿ ರೈತರ ಹತ್ಯೆ : ಸುಪ್ರೀಂ ಕೋರ್ಟ್ ನಲ್ಲಿ ಸ್ವಯಂಪ್ರೇರಿತ ದಾವೆ ದಾಖಲು

ಲಕ್ನೋ: ಇತ್ತೀಚಿನ ಲಖಿಂಪುರ ಖೇರಿ ಹಿಂಸಾಚಾರದ ಕುರಿತು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣವನ್ನು ಸ್ವೀಕರಿಸಿದೆ. ನಾಲ್ವರು ರೈತರು ಸೇರಿದಂತೆ ಒಟ್ಟು 8 ಮಂದಿ ಸಾವನ್ನಪ್ಪಿದ ಘಟನೆಯನ್ನು ಗಂಭೀರವಾಗಿ ಸ್ವೀಕರಿಸಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈ ಕ್ರಮಕ್ಕೆ ಮುಂದಾಗಿದೆ.

ಸುಪ್ರೀಮ್ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ನ್ಯಾಯಪೀಠವು ಇಂದು ಈ ಅರ್ಜಿಯ ವಿಚಾರಣೆ ನಡೆಸಲಿದೆ.

ಹಿಂಸಾಚಾರದಲ್ಲಿ ಮೃತಪಟ್ಟ ರೈತರು ಮತ್ತು ಪತ್ರಕರ್ತರ ಕುಟುಂಬಗಳನ್ನು ಭೇಟಿಯಾಗಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಪಂಜಾಬ್ ಮುಖ್ಯಮಂತ್ರಿ ಮತ್ತು ಛತ್ತೀಸ್ ಗಡದ ಮುಖ್ಯಮಂತ್ರಿ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರು ಲಖಿಂಪುರಕ್ಕೆ ಆಗಮಿಸಿದ ದಿನದ ನಂತರ ಸುಪ್ರೀಂ ಕೋರ್ಟ್ ನಿಂದ ಈ ತೀರ್ಮಾನ ಬಂದಿದೆ.

Join Whatsapp
Exit mobile version