ಕೃಷಿ ಕಾಯ್ದೆ ಕುರಿತ ಅರ್ಜಿ ವಿಚಾರಣಾ ಹಂತದಲ್ಲಿರುವಾಗ ಪ್ರತಿಭಟನೆ ಸಮಂಜಸವಲ್ಲ: ಸುಪ್ರೀಮ್ ಕೋರ್ಟ್

Prasthutha|

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳಿಗೆ ತಡೆ ನೀಡುವಂತೆ ಸಲ್ಲಿಸಲಾಗಿದ್ದ ಅರ್ಜಿಯು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿರುವಾಗ ರೈತರ ಪ್ರತಿಭಟನೆ ಸಮಂಜಸವಲ್ಲ ಎಂದು ಸುಪ್ರೀಮ್ ಕೋರ್ಟ್ ಇಂದು ಹೇಳಿದೆ.

- Advertisement -

ಉತ್ತರ ಪ್ರದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗೆ ನಾಲ್ವರು ರೈತರು ಸೇರಿದಂತೆ 8 ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಸುಪ್ರೀಮ್ ಕೋರ್ಟ್ ಇಂದು ರೈತರನ್ನು ತರಾಟೆಗೆ ತೆಗೆದುಕೊಂಡಿದೆ.

ಲಖಿಂಪುರ ಖೇರಿ ಪ್ರತಿಭಟನೆ ಅನುಮತಿ ರಹಿತವಾಗಿ ಆಯೋಜಿಸಲಾಗಿದ್ದು, ಈ ನಿಟ್ಟಿನಲ್ಲಿ ಮುಂದಕ್ಕೆ ಪ್ರತಿಭಟನೆ ನಡೆಸಬಾರದೆಂದು ಕೇಂದ್ರ ಸರ್ಕಾರದ ಪರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದರು.

- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳಿಗೆ ತಡೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯು ಅಕ್ಟೋಬರ್ 21 ರಂದು ನಡೆಯಲಿದೆ. ಈ ಮಧ್ಯೆ ರೈತರು ಬೀದಿಗಿಳಿದು ಪ್ರತಿಭಟಿಸಿದ ಕ್ರಮವನ್ನು ಪರಿಶೀಲಿಸಲಾಗುವುದು ಎಂದು ಸುಪ್ರೀಮ್ ಕೋರ್ಟ್ ತಿಳಿಸಿದೆ.

ಕೃಷಿ ಕಾಯ್ದೆಗಳ ವಿರುದ್ಧ ರಾಜಸ್ತಾನ ಹೈಕೋರ್ಟ್ ನಲ್ಲಿ ಸಲ್ಲಿಸಿದ ರೈತರು ಜಂತರ್ ಮಂತರ್ ನಲ್ಲಿ ಪ್ರತಿಭಟನೆಗೆ ಅನುಮತಿ ಕೋರಿದ ನಡೆಯನ್ನು ಕಳೆದ ವಾರ ಸುಪ್ರೀಂ ಕೋರ್ಟ್ ಆಕ್ಷೇಪಿಸಿತ್ತು.

Join Whatsapp