ಜಾರ್ಖಂಡ್ ನ್ಯಾಯಾಧೀಶರ ಹತ್ಯೆ ನ್ಯಾಯಾಂಗದ ಮೇಲಿನ ದಾಳಿಯೆಂದು ಬಣ್ಣಿಸಿದ ಸುಪ್ರೀಮ್ ಕೋರ್ಟ್ : ಸ್ವಯಂಪ್ರೇರಿತ ವಿಚಾರಣೆಗೆ ಒಲವು

Prasthutha|

ನವದೆಹಲಿ, ಜುಲೈ 30: ಜಾರ್ಖಂಡ್ ನಲ್ಲಿ ಜುಲೈ 28 ರಂದು ಜಿಲ್ಲಾ ಹೆಚ್ಚುವರಿ ನ್ಯಾಯಾಧೀಶ ಉತ್ತಮ್ ಆನಂದ್ ಅಪಘಾತದ ರೀತಿಯಲ್ಲಿ ಸಾವನ್ನಪ್ಪಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಮ್ ಕೋರ್ಟ್ ಸ್ವಯಂಪ್ರೇರಿಯವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ. ಉತ್ತಮ್ ಆನಂದ್ ಅವರು ಧನ್ಬಾದ್ ನಲ್ಲಿ ಬೆಳಗಿನ ವಾಯುವಿಹಾರದಲ್ಲಿದ್ದಾಗ ಅಪರಿಚಿತ ವಾಹನ ಹರಿಸಿ ಕೊಲೆಗೈದಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿತ್ತು.

- Advertisement -

ಈ ಪ್ರಕರಣದ ಕುರಿತು ತನಿಖೆ ನಡೆಸಿ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಜಾರ್ಖಂಡ್ ನ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾ ನಿರ್ದೇಶಕರಿಗೆ ಭಾರತೀಯ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ನ್ಯಾಯಪೀಠ ಸೂಚಿಸಿದೆ. ಜಾರ್ಖಂಡ್ ಹೈಕೋರ್ಟ್ ಈ ವಿಷಯವನ್ನು ಗಂಭೀರವಾಗಿ ಸ್ವೀಕರಿಸಿದೆ. ಹೈಕೋರ್ಟ್ ನ ಕಲಾಪದಲ್ಲಿ ಸುಪ್ರೀಮ್ ಕೋರ್ಟ್ ಹಸ್ತಕ್ಷೇಪ ನಡೆಸುವುದಿಲ್ಲ, ತನಿಖೆಯ ಮೇಲೆ ಹೈಕೋರ್ಟ್ ಮೇಲ್ವಿಚಾರಣೆ ಮುಂದುವರಿಯಲಿ. ಅದೇ ರೀತಿ ಈ ಪ್ರಕರಣದಲ್ಲಿ ಸುಪ್ರೀಮ್ ಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಲಿದೆಯೆಂದು ಸ್ಪಷ್ಟಪಡಿಸಿದೆ.

ಈ ಘಟನೆಯ ಕುರಿತು ಮಾಹಿತಿ ನೀಡಿರುವ ಸುಪ್ರೀಮ್ ಕೋರ್ಟ್ ವಕೀಲರ ಸಂಘದ ಅಧ್ಯಕ್ಷ ಹಾಗೂ ಹಿರಿಯ ವಕೀಲರಾದ ವಿಕಾಸ್ ಸಿಂಗ್ ಅವರು ನ್ಯಾಯಮೂರ್ತಿಗಳಾದ ಎನ್.ವಿ. ರಮಣ ಅವರು ನ್ಯಾಯಾಧೀಶರ ಹತ್ಯೆಯನ್ನು ಸ್ವಯಂ ಪ್ರೇರಿತವಾಗಿ ವಿಚಾರಣೆ ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದರು.

- Advertisement -

ಮಾಫಿಯಾದ ವ್ಯಕ್ತಿಯೊಬ್ಬರಿಗೆ ಜಾಮೀನು ನಿರಾಕರಿಸಿದ ಹಿನ್ನೆಲೆಯಲ್ಲಿ ಈ ಕೊಲೆ ನಡೆಸಲಾಗಿದೆಯೆಂದು ಆರೋಪಿಸಿರುವ ವಿಕಾಸ್ ಸಿಂಗ್ ಅವರು ಈ ಪ್ರಕರಣವನ್ನು ಸಿಬಿಐ ಗೆ ವಹಿಸುವಂತೆ ಆಗ್ರಹಿಸಿದ್ದಾರೆ. ಮಾತ್ರವಲ್ಲದೇ ಜಾಮೀನು ನಿರಾಕರಿಸಿದ ವಿಷಯವನ್ನು ನೆಪವಾಗಿಟ್ಟು ನ್ಯಾಯಾಧೀಶರನ್ನು ಕೊಲೆಮಾಡುವುದು ನ್ಯಾಯಾಂಗದ ಮೇಲಿನ ದಾಳಿಯೆಂದು ಅವರು ಟೀಕಿಸಿದ್ದಾರೆ.

ಜಾರ್ಖಂಡ್ ಹೈಕೋರ್ಟ್ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂಪ್ರೇರಿತ ವಿಚಾರಣೆಯನ್ನು ಕೈಗೆತ್ತಿಕೊಂಡಿರುವುದರಿಂದ ಸುಪ್ರೀಮ್ ಕೋರ್ಟ್ ಈ ವಿಷಯದಲ್ಲಿ ಹಸ್ತಕ್ಷೇಪ ನಡೆಸುವುದಿಲ್ಲವೆಂದು ಸಿಜೆಇ ಸ್ಪಷ್ಟಪಡಿಸಿದ್ದಾರೆ.

Join Whatsapp