ವಿಕೃತ ಕಾಮಿ ಉಮೇಶ್ ರೆಡ್ಡಿಗೆ ವಿಧಿಸಿದ್ದ ಗಲ್ಲು ಶಿಕ್ಷೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

Prasthutha|

ನವದೆಹಲಿ: ಕರ್ನಾಟಕ ಹೈಕೋರ್ಟ್‌ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಖಾಯಂಗೊಳಿಸಿದ್ದ ಮರಣದಂಡನೆಯನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ.

- Advertisement -

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ್ದ ಉಮೇಶ್ ರೆಡ್ಡಿಗೆ ದೊಡ್ಡ ರಿಲೀಫ್‌ ಸಿಕ್ಕಿದೆ. ಸುಪ್ರೀಂ ಕೋರ್ಟ್ ಸಿಜೆಐ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ವಿಕೃತ ಕಾಮಿ ಉಮೇಶ ರೆಡ್ಡಿಯಂತಹ ಕ್ರೂರಿಗಳಿಗೆ ತ್ವರಿತ ಶಿಕ್ಷೆಯಾಗಬೇಕು. ಆದರೆ, ಇಂದಿನ ವ್ಯವಸ್ಥೆಯೇ ಸರಿ ಇಲ್ಲ. ಹಾಗಾಗಿ, ಇಂತಹ ಕ್ರೂರಿಗಳು ಹುಟ್ಟುತ್ತಲೇ ಇದ್ದಾರೆ. ಇಂತಹವರನ್ನು ಮಟ್ಟಹಾಕಲು ಗಲ್ಲು ಶಿಕ್ಷೆಯನ್ನು ತ್ವರಿತವಾಗಿ ವಿಧಿಸಬೇಕು ಎಂದು ವಿಕೃತ ಕಾಮಿ ಉಮೇಶ ರೆಡ್ಡಿಯಿಂದ ಅತ್ಯಾಚಾರ, ಹತ್ಯೆಗೀಡಾದ ಸಂತ್ರಸ್ತೆಯೊಬ್ಬರ ಪುತ್ರನೊಬ್ಬನು ಒತ್ತಾಯಿಸಿದ್ದಾನೆ.

- Advertisement -

ಉಮೇಶ್‌ ರೆಡ್ಡಿಯಿಂದ ತನ್ನ ತಾಯಿ ದೌರ್ಜನ್ಯಕ್ಕೊಳಗಾಗಿದ್ದ ವೇಳೆ ಪ್ರತ್ಯಕ್ಷ ದರ್ಶಿಯಾಗಿದ್ದ ಅವರು ಜೊತೆ ತನ್ನ ನೋವನ್ನು ಹಂಚಿಕೊಂಡಿದ್ದಾರೆ. ಉಮೇಶ್‌ ರೆಡ್ಡಿಗೆ ಗಲ್ಲು ಶಿಕ್ಷೆಯನ್ನು ಹೈಕೋರ್ಟ್‌ ಕಾಯಂಗೊಳಿಸಿದೆ ನಿಜ. ಮತ್ತೆ ಸುಪ್ರೀಂಕೋರ್ಟ್‌ ಮೆಟ್ಟಿಲೇರಲು 6 ವಾರಗಳ ಕಾಲ ಅವಕಾಶ ಕಲ್ಪಿಸಲಾಗಿದೆ.

ಜೈಲಿನಲ್ಲಿ ಆತ ಕೊಳೆಯುತ್ತ ಬಿದ್ದಿದ್ದಾನೆ. ಆತನ ಬಗ್ಗೆ ಯಾರೂ ಕನಿಕರ ತೋರುವ ಅಗತ್ಯವೂ ಇಲ್ಲ. ಇಂತಹ ಕ್ರೂರಿಗಳಿಗೆ ಶಿಕ್ಷೆ ವಿಧಿಸುವಲ್ಲಿ ವಿಳಂಬವಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಕಾನೂನು ವ್ಯವಸ್ಥೆಯನ್ನು ಮತ್ತಷ್ಟುಬಲಪಡಿಸಬೇಕು. ಇಂತಹ ಕ್ರೂರಿಗಳಿಗೆ ತಕ್ಷಣವೇ ಗಲ್ಲು ಶಿಕ್ಷೆಯನ್ನು ವಿಧಿಸಬೇಕು. ಈ ಮೂಲಕ ಉಮೇಶ ರೆಡ್ಡಿಯಿಂದ ಅತ್ಯಾಚಾರ, ಹತ್ಯೆಗೀಡಾದ ಮಹಿಳೆಯರ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಅವರು ಒತ್ತಾಯಿಸಿದ್ದರು.

ಉಮೇಶ್‌ ರೆಡ್ಡಿ ಬೆಳಗ್ಗೆ 11ರಿಂದ ಮಧ್ಯಾಹ್ನ 2 ಗಂಟೆಯ ನಡುವೆ ಒಂಟಿ ಮಹಿಳೆಯರಿದ್ದ ಮನೆಗೆ ನುಗ್ಗುತ್ತಿದ್ದ. ರೂಮಿನಲ್ಲಿ ಮಹಿಳೆಯನ್ನು ಕೂಡಿ ಹಾಕಿ ಬೆತ್ತಲೆ ಮಾಡಿ ಅತ್ಯಾಚಾರ ಮಾಡಿ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ. ಬಹಳಷ್ಟು ಮಂದಿ ಮರ್ಯಾದೆಗೆ ಅಂಜಿ ದೂರು ನೀಡುತ್ತಿರಲಿಲ್ಲ.

Join Whatsapp