ಉತ್ತರ ಪ್ರದೇಶ ಮದರಸಾ ಶಿಕ್ಷಣ ಕಾಯ್ದೆಯ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

Prasthutha|

ನವದೆಹಲಿ: ಉತ್ತರ ಪ್ರದೇಶ ಮದರಸಾ ಶಿಕ್ಷಣ ಕಾಯ್ದೆಯ ಮಹತ್ವವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.

- Advertisement -


ಉತ್ತರ ಪ್ರದೇಶದ ಮದರಸಾ ಕಾನೂನನ್ನು ಅಸಂವಿಧಾನಿಕ ಎಂದು ಘೋಷಿಸಿದ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪ್ರಕಟಿಸಿದೆ.


ತನ್ನ ಆದೇಶದಲ್ಲಿ, ನ್ಯಾಯಾಲಯವು ಕಾನೂನನ್ನು ಸಾಂವಿಧಾನಿಕ ಎಂದು ಹೇಳಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಹೈಕೋರ್ಟ್ ತೀರ್ಪಿನ ವಿರುದ್ಧ ಅಂಜುಮ್ ಕಡಾರಿ ಸಲ್ಲಿಸಿದ ಪ್ರಮುಖ ಸೇರಿದಂತೆ ಎಂಟು ಅರ್ಜಿಗಳ ತೀರ್ಪನ್ನು ಅಕ್ಟೋಬರ್ 22 ರಂದು ಕಾಯ್ದಿರಿಸಿತ್ತು.
ಮಾರ್ಚ್ 22 ರಂದು, ಅಲಹಾಬಾದ್ ಹೈಕೋರ್ಟ್ ಈ ಕಾಯ್ದೆಯನ್ನು ಅಸಂವಿಧಾನಿಕ ಮತ್ತು ಜಾತ್ಯತೀತತೆಯ ತತ್ವದ ಉಲ್ಲಂಘನೆ ಎಂದು ಘೋಷಿಸಿತ್ತು. ಏಪ್ರಿಲ್ 5 ರಂದು, ಸಿಜೆಐ ನೇತೃತ್ವದ ಪೀಠವು ಉತ್ತರ ಪ್ರದೇಶ ಬೋರ್ಡ್ ಆಫ್ ಮದರಸಾ ಎಜುಕೇಶನ್ ಆಕ್ಟ್, 2004 ಅನ್ನು ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿಗೆ ತಡೆಯಾಜ್ಞೆ ನೀಡಿತ್ತು.

- Advertisement -


ಉತ್ತರ ಪ್ರದೇಶ ಬೋರ್ಡ್ ಆಫ್ ಮದರಸಾ ಎಜುಕೇಶನ್ ಆಕ್ಟ್ 2004′ ರ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಶಿಕ್ಷಣದ ಗುಣಮಟ್ಟವನ್ನು ನಿಗದಿಪಡಿಸುವುದು ಸರ್ಕಾರದ ಹಕ್ಕು ಎಂದು ನ್ಯಾಯಾಲಯ ಹೇಳಿದೆ.



Join Whatsapp