Home ಟಾಪ್ ಸುದ್ದಿಗಳು ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಸುಪ್ರೀಂ ಆದೇಶ ಸ್ವೀಕಾರ್ಹವಲ್ಲ: ಕಾಂಗ್ರೆಸ್

ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಸುಪ್ರೀಂ ಆದೇಶ ಸ್ವೀಕಾರ್ಹವಲ್ಲ: ಕಾಂಗ್ರೆಸ್

ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಆರು ಅಪರಾಧಿಗಳನ್ನು ಅವಧಿಗೆ ಮುನ್ನ ಬಿಡುಗಡೆಗೊಳಿಸುವ ಸುಪ್ರೀಂ ಕೋರ್ಟ್’ನ ಆದೇಶವು ಸ್ವೀಕಾರ್ಹವಲ್ಲ ಮತ್ತು ಸಂಪೂರ್ಣ ತಪ್ಪು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸರ್ವೋಚ್ಚ ನ್ಯಾಯಾಲಯ ಭಾರತದ ಮನಸ್ಥಿತಿಗೆ ಅನುಗುಣವಾಗಿ ಕಾರ್ಯನಿರ್ವಹಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್, ಆರ್.ಪಿ. ರವಿಚಂದ್ರನ್ ಸೇರಿದಂತೆ ಆರು ಮಂದಿ ಅಪರಾಧಿಗಳನ್ನು ಅವಧಿಗೂ ಮುನ್ನ ಬಿಡುಗಡೆಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಬಿ.ವಿ ನಾಗರತ್ನ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾದ ಎ.ಜಿ. ಪೆರಾರಿವಾಲನ್ ಬಿಡುಗಡೆ ಮಾಡಿದ ಸುಪ್ರೀಂ ಕೋರ್ಟ್ ತೀರ್ಪು ಇತರ ಅಪರಾಧಿಗಳಿಗೂ ಅನ್ವಯಿಸಲಿದೆ ಎಂದು ತಿಳಿಸಿದೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಳಿನಿ, ರವಿಚಂದ್ರನ್, ಸಂತನ್, ಮುರುಗನ್, ಪೆರಾರಿವಾಲನ್, ರಾಬರ್ಟ್ ಪಾಯಸ್ ಮತ್ತು ಜಯಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ನಳಿನಿ ,ಶ್ರೀಹರನ್ ಮತ್ತು ರವಿಚಂದ್ರನ್ ಅವರು ಅವಧಿಪೂರ್ಣ ಬಿಡುಗಡೆಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದರು. ತಮಿಳು ಸರಕಾರವೂ ಇವರ ಬಿಡುಗಡೆಗೆ ಶಿಪಾರಸು ಮಾಡಿತ್ತು.

ಮೇ 21, 1991 ರ ರಾತ್ರಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ಜಾಥಾದಲ್ಲಿ ಧನು ಎಂದು ಗುರುತಿಸಲ್ಪಟ್ಟ ಮಹಿಳಾ ಆತ್ಮಾಹುತಿ ಬಾಂಬರ್‌, ರಾಜೀವ್ ಗಾಂಧಿಯನ್ನು ಹತ್ಯೆ ನಡೆಸಿದ್ದರು.

Join Whatsapp
Exit mobile version