ಸೂರಜ್ ರೇವಣ್ಣ ವಿರುದ್ಧವೂ ಗಂಭೀರ ಲೈಂಗಿಕ ದೌರ್ಜನ್ಯ ಆರೋಪ

Prasthutha|

ಹಾಸನ: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣದ ಬಳಿಕ ಅವರ ಸಹೋದರ ಸೂರಜ್ ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ವಿಧಾನ ಪರಿಷತ್ ಸದಸ್ಯರೂ ಆದ ಸೂರಜ್ ರೇವಣ್ಣ ಸಲಿಂಗಕಾಮ, ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.

- Advertisement -

ಸೂರಜ್ ರೇವಣ್ಣ ಅವರು ತನ್ನನ್ನು ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ, ದೌರ್ಜನ್ಯ ಎಸಗಿದ್ದಾರೆ. ಈಗ ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತ ಡಿಜಿಪಿ, ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ಸುಮಾರು 14ರಿಂದ 15 ಪುಟದ ದೂರು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಜೂನ್ 16ರ ಭಾನುವಾರಂದು ಸೂರಜ್ ರೇವಣ್ಣ ತನಗೆ ವಾಟ್ಸಪ್ ಮೂಲಕ ಸಂದೇಶ ಕಳುಹಿಸಿ, ಉದ್ಯೋಗದ ಭರವಸೆ ನೀಡಿ ಗನ್ನಿಕಡ ತೋಟದ ಮನೆಗೆ ಕರೆಸಿಕೊಂಡಿದ್ದರು. ಆದರೆ ಅಲ್ಲಿನ ಕೊಠಡಿಯೊಂದಕ್ಕೆ ಕರೆದುಕೊಂಡು ಹೋದ ಅವರು, ನನ್ನನ್ನು ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೇ, ನನ್ನ ದೇಹದ ಮೇಲೆಲ್ಲ ಗಾಯ ಮಾಡಿದ್ದಾರೆ. ಇದನ್ನು ಎಲ್ಲಾದರೂ ಬಾಯಿಬಿಟ್ಟರೆ ಕೊಲ್ಲುವ ಬೆದರಿಕೆ ಕೂಡ ಹಾಕಿದ್ದಾರೆ. ಈ ಘಟನೆಯಿಂದ ನಾನು ಮಾನಸಿಕವಾಗಿ ಕುಗ್ಗಿದ್ದೇನೆ ಎಂದು ಜೆಡಿಎಸ್ ಕಾರ್ಯಕರ್ತ ದೂರಿನಲ್ಲಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.

Join Whatsapp
Exit mobile version