ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಎಲ್ ಸಿ ಸೂರಜ್ ರೇವಣ್ಣಗೆ ಜು.18 ರ ವರೆಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರಕರಣದ ವಿಚಾರಣೆ ನಡೆಸಿದ 42ನೇ ಎಸಿಎಂಎಂ ನ್ಯಾಯಾಲಯವು ಸೂರಜ್ ರೇವಣ್ಣಗೆ ಮತ್ತೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸೂರಜ್ ಅವರು ಸಿಐಡಿ ಕಸ್ಟಡಿಯಲ್ಲಿದ್ದರು. ಈಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸೂರಜ್ ರೇವಣ್ಣರನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರು ಜೂ.22 ರಂದು ಬಂಧಿಸಿದ್ದರು. ನಂತರ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.