Home ಟಾಪ್ ಸುದ್ದಿಗಳು ಸೂರಜ್‌ ರೇವಣ್ಣ ಜಾಮೀನು ಅರ್ಜಿ ವಜಾ

ಸೂರಜ್‌ ರೇವಣ್ಣ ಜಾಮೀನು ಅರ್ಜಿ ವಜಾ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಸಲ್ಲಿಸಿದ್ದ ಜಮೀನು ಅರ್ಜಿ ವಜಾಗೊಂಡಿದೆ.

ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್‌ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಇಂದು 42 ಎಸಿಎಂಎಂ ಕೋರ್ಟ್‌ನಲ್ಲಿ ನಡೆಯಿತು.27 ವರ್ಷದ ಸಂತ್ರಸ್ತನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್‌ ರೇವಣ್ಣ ಅವರನ್ನು ಹೊಳೆನರಸೀಪುರ ಪೊಲೀಸರು ಬಂಧಿಸಿದ್ದರು. ಕೋರ್ಟ್‌ ಸೂರಜ್‌ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಿದ್ದು ಸದ್ಯ ಪರಪ್ಪನ ಅಗ್ರಹಾರದಲ್ಲಿದ್ದಾರೆ.

Join Whatsapp
Exit mobile version