Home ಟಾಪ್ ಸುದ್ದಿಗಳು ಸೂರತ್ | ಗಣಪತಿ ಉತ್ಸವದ ವೇಳೆ ಗುಂಪು ಘರ್ಷಣೆ: 32 ಮಂದಿ ಬಂಧನ

ಸೂರತ್ | ಗಣಪತಿ ಉತ್ಸವದ ವೇಳೆ ಗುಂಪು ಘರ್ಷಣೆ: 32 ಮಂದಿ ಬಂಧನ

ಸೂರತ್: ಗುಜರಾತ್ ನ ಸೂರತ್ ನಗರದಲ್ಲಿ ಗಣಪತಿ ಉತ್ಸವದ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಕಲ್ಲು ತೂರಾಟದಿಂದಾಗಿ ಗಣೇಶ ಮೂರ್ತಿಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಸೈಯದ್ ಪುರ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಘಟನೆ ನಡೆದಿದೆ. ಪ್ರಕರಣ ಸಂಬಂಧ ಅಪ್ರಾಪ್ತರು ಸೇರಿದಂತೆ 32 ಮಂದಿಯನ್ನು ಲಾಲ್ ಗೇಟ್ ಪೊಲೀಸರು ಬಂಧಿಸಿದ್ದಾರೆ.


‘ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಕೆಲವು ದುಷ್ಕರ್ಮಿಗಳು ಗಣೇಶ ಮಂಟಪದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪ್ರಕರಣ ಸಂಬಂಧ ಅಪ್ರಾಪ್ತರನ್ನು ಬಂಧಿಸಿರುವುದನ್ನು ಖಂಡಿಸಿ 200ರಿಂದ 300 ಜನರ ಗುಂಪು ಪೊಲೀಸ್ ಠಾಣೆಗೆ ಘೇರಾವ್ ಹಾಕಿತ್ತು. ಇದೇ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಪೊಲೀಸ್ ವಾಹನಕ್ಕೂ ಹಾನಿಯಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


‘ಘಟನಾ ಸ್ಥಳದಲ್ಲಿ ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಅಶ್ರುವಾಯು ಶೆಲ್ಗಳನ್ನು ಸಿಡಿಸಿದ್ದಾರೆ. ಘಟನೆ ಸಂಬಂಧ ಇದುವರೆಗೆ 32 ಜನರನ್ನು ಬಂಧಿಸಿದ್ದು, ಎರಡು ಪ್ರತ್ಯೇಕ ಎಫ್ಐಆರ್ಗಳನ್ನು ದಾಖಲಿಸಲಾಗಿದೆ’ ಎಂದು ಸೂರತ್ ಪೊಲೀಸ್ ಕಮಿಷನರ್ ಅನುಪಮ್ ಸಿಂಗ್ ಗಹ್ಲೌತ್ ಮಾಹಿತಿ ನೀಡಿದ್ದಾರೆ.

Join Whatsapp
Exit mobile version