ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ: ಓರ್ವನಿಗೆ ಜಾಮೀನು

Prasthutha|

ಮಂಗಳೂರು : ಸುರತ್ಕಲ್ ನಲ್ಲಿ ನಡೆದಿದ್ದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಗೆ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

- Advertisement -


ಬಂಟ್ವಾಳದ ಹರ್ಷಿತ್ (28) ಕೊಲೆ ಆರೋಪಿಗಳಿಗೆ ತನ್ನ ಮನೆಯಲ್ಲಿ ಆಶ್ರಯ ನೀಡಿದ್ದನು. ಈ ಹಿನ್ನೆಲೆಯಲ್ಲಿ ಪೊಲೀಸರು ಆ. 18 ರಂದು ಆತನನ್ನು ಬಂಧಿಸಿದ್ದರು. ಇದೀಗ ಆತನಿಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.


50 ಸಾವಿರ ರೂ. ಶ್ಯೂರಿಟಿಯೊಂದಿಗೆ ಐಡೆಂಟಿಟಿ ಕಾರ್ಡ್, ಈ ಮೇಲ್, ಮೊಬೈಲ್ ಸಂಖ್ಯೆ ನೀಡಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು, ತನಿಖೆಗೆ ಸಹಕರಿಸಬೇಕು. ನ್ಯಾಯಾಲಯದ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಬೇಕು ಮುಂತಾದ ಷರತ್ತುಗಳನ್ನು ವಿಧಿಸಲಾಗಿದೆ.

- Advertisement -


ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ರದ್ದುಪಡಿಸುವುದಾಗಿಯೂ ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ಸೆ.7ರಂದು ನ್ಯಾಯಾಲಯ ಜಾಮೀನು ನೀಡಿದ್ದು, ಸೆ.13ರಂದು ಮಂಗಳೂರು ಜೈಲಿನಿಂದ ಆರೋಪಿ ಬಿಡುಗಡೆಯಾಗಿದ್ದಾನೆ ಎಂದು ತಿಳಿದುಬಂದಿದೆ.
ಪಾಝಿಲ್ ಕೊಲೆ ಕೃತ್ಯದ ಬಳಿಕ ಆರೋಪಿಗಳನ್ನು ಕಾರಿನಲ್ಲಿ ತನ್ನ ಮನೆಗೆ ಕರೆದುಕೊಂಡು ಹೋಗಿ ಹರ್ಷಿತ್ ಆಶ್ರಯ ನೀಡಿದ್ದ ಎಂದು ಆರೋಪಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಸುಹಾಸ್ ಶೆಟ್ಟಿ, ಮೋಹನ್, ಅಭಿಷೇಕ್, ಶ್ರೀನಿವಾಸ್, ದೀಕ್ಷಿತ್, ಗಿರಿಧರ್ ಮತ್ತು ಅಜಿತ್ ಕ್ರಾಸ್ತಾನನ್ನು ಪೊಲೀಸರು ಬಂಧಿಸಿದ್ದು, ಸದ್ಯ ಅವರು ಜೈಲಿನಲ್ಲಿದ್ದಾರೆ.

Join Whatsapp