ಮಂಗಳೂರು: ಕೃಷ್ಣಾಪುರದಲ್ಲಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಲಕ್ಷ್ಮೀಶ ದೇವಾಡಿಗನಿಗೆ 14 ದಿನಗಳ ಪೊಲೀಸ್ ಕಸ್ಟಡಿ ನೀಡಿ ನ್ಯಾಯಾಲಯ ಆದೇಶ ನೀಡಿದೆ.
ಕಾಟಿಪಳ್ಳ 4ನೇ ಬ್ಲಾಕ್ ನಿವಾಸಿ ಲಕ್ಷ್ಮೀಶ ದೇವಾಡಿಗನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆತನಿಗೆ 14 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಲಕ್ಷ್ಮೀಶ ದೇವಾಡಿಗ ಜಲೀಲ್ ಹತ್ಯೆ ಪ್ರಕರಣ ಸೂತ್ರದಾರ ಎನ್ನಲಾಗಿದೆ. ಹತ್ಯೆಗೂ ಮುನ್ನ ವಾರದ ಹಿಂದೆ ಜಲೀಲ್ ಅಂಗಡಿಗೆ ನುಗ್ಗಿ ದಾಂಧಲೆ ನಡೆಸಿ, ಕಲ್ಲೆಸೆದು ಹಾನಿಮಾಡಿದ್ದ ಎಂದು ತಿಳಿದುಬಂದಿದೆ.
ಪಿಂಕಿ ನವಾಝ್ ಕೊಲೆ ಯತ್ನ ಪ್ರಕರಣದಲ್ಲೂ ಈತನ ಕೈವಾಡ ಇದೆ ಎನ್ನಲಾಗಿದೆ. ಇದರ ಜೊತೆಗೆ ಗಾಂಜಾ ಸೇವನೆ ಮಾಡಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಮಕ್ಕಳಿಗೆ ಹಲ್ಲೆ ನಡೆಸಿದ ಆರೋಪವನ್ನು ಕೂಡ ಈತ ಎದುರಿಸುತ್ತಿದ್ದಾನೆ. ಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ (43) ಅವರಿಗೆ ಚೂರಿ ಇರಿದು ಹತ್ಯೆ ಮಾಡಲಾಗಿತ್ತು. ಹತ್ಯೆ ಸಂಬಂಧ ಸುವಿನ್ ಕಾಂಚನ್ ಯಾನೆ ಮುನ್ನಾ (25) ಮತ್ತು ಶೈಲೇಶ್ ಪೂಜಾರಿ (20), ಪವನ್ ನನ್ನು ಪೊಲೀಸರು ಸೋಮವಾರ ಬಂಧಿಸಿದ್ದರು.