ಸುರತ್ಕಲ್ ಟೋಲ್’ಗೇಟ್ ರದ್ದು: ಸಂಸದ ನಳಿನ್ ಕುಮಾರ್ ಕಟೀಲ್

Prasthutha|

ಮಂಗಳೂರು: ಅಕ್ರಮವಾಗಿ ನಿರ್ಮಿಸಲಾಗಿರುವ ಸುರತ್ಕಲ್ ಟೋಲ್’ಗೇಟ್ ಅನ್ನು ರದ್ದುಪಡಿಸುವುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

- Advertisement -

ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರ್ಇ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು.ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

ಕಳೆದ 17 ದಿನಗಳಿಂದ ಸುರತ್ಕಲ್ ಟೋಲ್’ಗೇಟ್ ವಿರೋಧಿ ಹೋರಾಟ ಸಮಿತಿಯಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಈ ಮಧ್ಯೆ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.



Join Whatsapp