ಸುರತ್ಕಲ್: ಸುರತ್ಕಲ್ ಟೋಲ್ ಗೇಟ್ ತಾತ್ಕಾಲಿಕ ತೆರವಿಗೆ ಒತ್ತಾಯಿಸಿ ಸಮಾನ ಮನಸ್ಕ ಸಂಫಟನೆಗಳಿಂದ ಹಮ್ಮಿಕೊಂಡಿರುವ ಟೋಲ್ ಗೇಟ್ ಚಲೋ ಪಾದಯಾತ್ರೆಗೆ ಮಂಗಳವಾರ ಹೆಜಮಾಡಿ ಟೋಲ್ ಗೇಟ್ ಬಳಿ ಚಾಲನೆ ದೊರೆತಿದೆ.
ಜಾಥಾದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ವಿನಯಕುಮಾರ್ ಸೊರಕೆ, ಮೊಯ್ದಿನ್ ಬಾವ, ನ್ಯಾಯವಾದಿ ದಿನೇಶ್ ಹೆಗ್ಡೆ ಉಳೇಪ್ಪಾಡಿ, ಮುನೀರ್ ಕಾಟಿಪಳ್ಳ ಸೇರಿದಂತೆ ಹಲವು ಸಂಘ ಸಂಸ್ಥೆಗಳ ಮುಖಂಡರು ಭಾಗಿಯಾಗಿದ್ದಾರೆ.