ಸುರತ್ಕಲ್‌ ಟೋಲ್‌ ಪ್ಲಾಜಾ ತೆರವು: ಸಚಿವ ಸಿ.ಸಿ. ಪಾಟೀಲ

Prasthutha|

- Advertisement -

ಬೆಂಗಳೂರು: ದಕ್ಷಿಣ ಕನ್ನಡದ ಸುರತ್ಕಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ಟೋಲ್‌ ಸಂಗ್ರಹ ಕೇಂದ್ರ ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ತಿಳಿಸಿದರು.

ವಿಧಾನಸಭೆಯಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್‌, ‘ಮಂಗಳೂರಿನಲ್ಲಿ 60 ಕಿ.ಮೀ. ಅಂತರದಲ್ಲಿ ಮೂರು ಟೋಲ್‌ ಕೇಂದ್ರಗಳಿವೆ. ಸುರತ್ಕಲ್‌ ಟೋಲ್‌ ಪ್ಲಾಜಾ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದೆ. ಅದನ್ನು ತೆರವುಗೊಳಿಸುವಂತೆ ಆಗ್ರಹಿಸಿ ಮೂರು ದಿನಗಳಿಂದ ಧರಣಿ ನಡೆಯುತ್ತಿದೆ. ತಕ್ಷಣ ಟೋಲ್‌ ಪ್ಲಾಜಾ ತೆರವು ಮಾಡಬೇಕು’ ಎಂದು ಒತ್ತಾಯಿಸಿದರು.

- Advertisement -

ಸುರತ್ಕಲ್‌ ಬಳಿ ನವಯುಗ ಕನ್‌ಸ್ಟ್ರಕ್ಷನ್ಸ್‌ ಮತ್ತು ನವ ಮಂಗಳೂರು ಬಂದರು ರಸ್ತೆ ಕಂಪನಿಗಳು ರಸ್ತೆ ನಿರ್ಮಿಸಿವೆ. ಈ ಕಾರಣದಿಂದಾಗಿ 60 ಕಿ.ಮೀ. ಅಂತರದ ಮಧ್ಯದಲ್ಲಿ ಟೋಲ್‌ ಸಂಗ್ರಹಣಾ ಕೇಂದ್ರ ತೆರೆಯಲಾಗಿತ್ತು. ಇದು ಅನಧಿಕೃತ ಟೋಲ್‌ ಪ್ಲಾಜಾ ಅಲ್ಲ. ಈಗ ತೆರವು ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.



Join Whatsapp