Home ಜಾಲತಾಣದಿಂದ ಸುರತ್ಕಲ್ | ಯುವಕನಿಗೆ ಚೂರಿ ಇರಿತ

ಸುರತ್ಕಲ್ | ಯುವಕನಿಗೆ ಚೂರಿ ಇರಿತ


ಸುರತ್ಕಲ್: ಯುವಕನಿಗೆ ಚೂರಿಯಿಂದ ಇರಿದಿರುವ ಘಟನೆ ಸುರತ್ಕಲ್ ಜನತಾ ಕಾಲನಿಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಕಾನ ನಿವಾಸಿ ಮುಹಮ್ಮದ್ ಶಾಫಿ(35) ಚೂರಿ ಇರಿತಕ್ಕೊಳಗಾದವರು. ಅದೇ ಪರಿಸರದ ಯುವಕ ತ್ವಾಹಿರ್ (24) ಚೂರಿಯಿಂದ ಇರಿದ ಆರೋಪಿ ಎಂದು ತಿಳಿದು ಬಂದಿದೆ.

ಗುರುವಾರ ರಾತ್ರಿ ಮಸೀದಿಯ ಬಳಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ತ್ವಾಹಿರ್ ತನ್ನ ಕಾರಿನಲ್ಲಿ ತಂದಿದ್ದ ಚೂರಿಯಿಂದ ತನಗೆ ಚುಚ್ಚಿದ್ದಾನೆ ಎಂದು ಶಾಫಿ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಶಾಫಿಯ ಕೈ ಮತ್ತು ಬೆನ್ನಿಗೆ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.‌

Join Whatsapp
Exit mobile version