ಸುರತ್ಕಲ್: ಸುರತ್ಕಲ್ ಸಮೀಪದ ಹೊನ್ನಕಟ್ಟೆ ಜಂಕ್ಷನ್’ನಲ್ಲಿ ಶುಕ್ರವಾರ ಮಧ್ಯಾಹ್ನ ಓಮ್ನಿ ಕಾರಿನ ಮೇಲೆ ಲಾರಿ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.
ಓಮ್ನಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸುರತ್ಕಲ್ ಉತ್ತರ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.