ಸಚಿವರು, ಕಾಂಗ್ರೆಸ್ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದ ಸುರ್ಜೇವಾಲ

Prasthutha|

- Advertisement -

ಬೆಂಗಳೂರು: ಸಿಎಂ ವಿಚಾರವಾಗಿ ಕೈ ಶಾಸಕ, ಸಚಿವರ ವಿಭಿನ್ನ ಹೇಳಿಕೆಗಳಿಗೆ ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜಿವಾಲ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಒಂದು ಚೌಕಟ್ಟು ಅಂತ ಇದೆ. ಅದನ್ನು ಮೀರಿ ಸಚಿವರು, ಶಾಸಕರು ಮಾತನಾಡುವಂತಿಲ್ಲ. ಒಂದು ವೇಳೆ ಮಾತನಾಡಿದ್ದೇ ಆದ್ರೇ ಅಂಥವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಕಾಂಗ್ರೆಸ್ ಶಾಸಕರು ಸಚಿವರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತಾಡಿದರು. ಇಂದಿನ ಕಾಂಗ್ರೆಸ್ ನಾಯಕರ ಸಭೆಯಲ್ಲಿ ನಿಗಮ ಮಂಡಳಿ ನೇಮಕದ ಬಗ್ಗೆಯೂ ಚರ್ಚೆ ಆಗಿದೆ. ಮತ್ತಷ್ಟು ಚರ್ಚೆ ಆಗಬೇಕಿದೆ ಎಂದರು.

- Advertisement -

ಮಧ್ಯಪ್ರದೇಶ ಚುನಾವಣೆ ಮುಗಿದ ಬಳಿಕ ಮತ್ತೆ ವಾಪಸ್ ಬರುತ್ತೇನೆ. 2-3 ಹಂತದಲ್ಲಿ ಮಾತುಕತೆ ಆಗಬೇಕು. ಅಧಿಕಾರ ಹಂಚಿಕೆ ಬಗ್ಗೆ ಸಚಿವರು, ಶಾಸಕರು ಮಾತನಾಡುವುದು ಸರಿಯಲ್ಲ. ಸಿಎಂ, ಡಿಸಿಎಂ, ನಮ್ಮನ್ನು ಭೇಟಿ ಮಾಡಿ ನಿಮ್ಮ ಅಭಿಪ್ರಾಯ ತಿಳಿಸಿ ಎಂದರು.

Join Whatsapp