►‘ಕುಮಾರಸ್ವಾಮಿ ಸುಮ್ಮನೆ ಆರೋಪ ಮಾಡುತ್ತಾರೆ’
ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಇದ್ದ ಸಭೆ ಅಧಿಕೃತ ಅಲ್ಲ ಎಂದು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ನಡೆದಿರುವುದು ಬಿಬಿಎಂಪಿ ಅಧಿಕಾರಿಗಳ ಜೊತೆಗಿನ ಸಭೆ ಅಲ್ಲ. ಸುರ್ಜೇವಾಲಾ ಅಧಿಕೃತ ಸಭೆ ನಡೆಸಿಲ್ಲ. ಶಾಸಕರ ಜೊತೆ ಚರ್ಚೆ ನಡೆಸಿದ್ದಾರೆ ಅಷ್ಟೇ ಎಂದು ಹೇಳಿದರು.
ಡಿಸಿಎಂ ಪಾಲ್ಗೊಂಡಿದ್ದ ಸಭೆ ಅದು. ಚುನಾವಣೆ ಬಗ್ಗೆ ಚರ್ಚೆ ಮಾಡಲು ಸಭೆ ಕರೆಯಲಾಗಿತ್ತು. ಕುಮಾರಸ್ವಾಮಿ ಸುಮ್ಮನೆ ಆರೋಪ ಮಾಡುತ್ತಾರೆ. ಸುರ್ಜೇವಾಲಾ ಅವರು ಅಧಿಕಾರಿಗಳ ಸಭೆ ಕರೆಯೋಕ್ಕಾಗುತ್ತಾ..?, ಬಿಜೆಪಿಯವರು ಬೇಕಾದರೆ ರಾಜ್ಯಪಾಲರಿಗೆ ದೂರು ಕೊಡಲಿ ಎಂದು ತಿಳಿಸಿದರು.