ಚಿಕ್ಕಮಗಳೂರು: ಲಂಚ ಪಡೆಯುತ್ತಿರುವ ಸರ್ವೆ ಸೂಪರ್ವೈಸರ್ ಒಬ್ಬ ರೆಡ್ ಹ್ಯಾಂಡ್ ಆಗಿ ಎಸಿಬಿಗೆ ಸಿಕ್ಕಿಬಿದ್ದ ಘಟನೆ ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ.
ಪ್ರಕಾಶ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸರ್ವೇ ಸೂಪರ್ವೈಸರ್ ಎಂದು ತಿಳಿದು ಬಂದಿದೆ.
ಪ್ರಕಾಶ್ ಜಮೀನು ಪಕ್ಕಾ ಪೋಡ್ ಮಾಡಿಕೊಡಲು 4 ಲಕ್ಷರೂ.ಗೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದ್ದು, ಗೋಣಿಬೀಡು ಗ್ರಾಮದ ಮಹೇಶ್ ಎಂಬುವವರಿಂದ ಮುಂಗಡ 1 ಲಕ್ಷ ರೂ. ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾನೆ.
ಎಸಿಬಿ ಎಸ್ಪಿ ಸೈಮನ್, ಇನ್ಸ್ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಚಿಕ್ಕಮಗಳೂರು: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಸರ್ವೆ ಸೂಪರ್ವೈಸರ್
Prasthutha|