ಉಡುಪಿ: ಕ್ಯಾಚ್ ಹಿಡಿದು ವಿಶ್ವಕಪ್ ಗೆಲ್ಲಿಸಿದ ತುಳುನಾಡಿನ ಅಳಿಯ ಸೂರ್ಯಕುಮಾರ್’ಗೆ ಭವ್ಯ ಸ್ವಾಗತ

Prasthutha|

ಉಡುಪಿ: ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ನಿರ್ಣಾಯಕ ಘಟ್ಟದಲ್ಲಿ ಅತ್ಯದ್ಭುತ ಕ್ಯಾಚ್ ಹಿಡಿಯುವ ಮೂಲಕ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸೂರ್ಯಕುಮಾರ್ ಯಾದವ್ ಉಡುಪಿಗೆ ಭೇಟಿ ನೀಡಿ ಗಮನ ಸೆಳೆದಿದ್ದಾರೆ.

- Advertisement -

ತುಳುನಾಡಿನ ಅಳಿಯ ಸೂರ್ಯಕುಮಾರ್ ಯಾದವ್‌, ಇಲ್ಲಿನ ಕಾಪು ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಸೂರ್ಯಕುಮಾರ್ ಯಾದವ್, ಉಡುಪಿ ಮೂಲದ ದೇವಿಶಾ ಶೆಟ್ಟಿಯನ್ನು ಮದುವೆಯಾಗಿದ್ದು, ಇದೀಗ ಟಿ20 ವಿಶ್ವಕಪ್ ಗೆಲುವಿನ ಬಳಿಕ ಉಡುಪಿಗೆ ಭೇಟಿ ನೀಡಿದ್ದಾರೆ. ಇಲ್ಲಿನ ಕಾಪು ಹೊಸ ಮಾರಿಗುಡಿಗೆ ಸೂರ್ಯಕುಮಾರ್ ಯಾದವ್ ಪತ್ನಿ ದೇವಿಶಾ ಶೆಟ್ಟಿ ಜತೆ ಆಗಮಿಸಿದ್ದು, ಭವ್ಯ ಸ್ವಾಗತ ನೀಡಲಾಯಿತು.

Join Whatsapp