ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಕನ್ನಡಿಗ ರಾಹುಲ್ ‘ಔಟ್’ !

Prasthutha|

ಕಾನ್ಪುರ: ನ್ಯೂಜಿಲೆಂಡ್ ವಿರುದ್ಧದ 2 ಟೆಸ್ಟ್ ಪಂದ್ಯಗಳ ಸರಣಿಯಿಂದ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಕನ್ನಡಿಗ ಕೆ.ಎಲ್. ರಾಹುಲ್ ಅಲಭ್ಯರಾಗಿದ್ದು, ರಾಹುಲ್ ಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ ತಂಡವನ್ನು ಸೇರಿಕೊಳ್ಳಲಿದ್ದಾರೆ.

- Advertisement -

ಈ  ಕುರಿತು ಟ್ವೀಟ್ ಮಾಡಿರುವ BCCI ಹಾಗೂ ICC, ತೊಡೆಯ ಸ್ನಾಯು ಸೆಳೆತದಿಂದಾಗಿ ಕೆ.ಎಲ್.ರಾಹುಲ್, ನ್ಯೂಜಿಲೆಂಡ್ ವಿರುದ್ಧ 2 ಟೆಸ್ಟ್ ಪಂದ್ಯಗಳ ಸರಣಿಯಿಂದ ಹೊರಗುಳಿಯಲಿದ್ದಾರೆ. ಅವರ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಿದೆ. ಮಂಗಳವಾರ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ ಅಭ್ಯಾಸ ನಡೆಸುವ ವೇಳೆ ರಾಹುಲ್ ಕಾಣಿಸಿಕೊಂಡಿರಲಿಲ್ಲ. ಉಳಿದಂತೆ ಶ್ರೇಯಸ್ ಅಯ್ಯರ್, ಮಯಾಂಕ್ ಅಗರ್’ವಾಲ್, ಶುಭನಮ್ ಗಿಲ್ ಹಾಗೂ ಉಪನಾಯಕ ಚೇತೇಶ್ವರಪೂಜಾರ ನೆಟ್ಸ್’ನಲ್ಲಿ ಬ್ಯಾಟಿಂಗ್ ಮಾಡಿದರು.  

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯವು ಗುರುವಾರದಿಂದ ಕಾನ್ಪುರದಲ್ಲಿ ನಡೆಯಲಿದೆ. ಈಗಾಗಲೇ ರೋಹಿತ್ ಶರ್ಮಾ ವಿಶ್ರಾಂತಿ ಬಯಸಿ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಮತ್ತೊಂದೆಡೆ ವಿರಾಟ್ ಕೊಹ್ಲಿ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುತ್ತಿಲ್ಲ. ಹೀಗಾಗಿ ನಾಯಕತ್ವ ಜವಬ್ಧಾರಿಯು ಅಜಿಂಕ್ಯಾ ರಹಾನೆ ಹೆಗಲೇರಿದೆ.

Join Whatsapp