ಮಾಜಿ ಸಂಸದೆ ಸುಷ್ಮೀತಾ ದೇವ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ

Prasthutha|

ನವದೆಹಲಿ: ಕಾಂಗ್ರೆಸ್ ನ ಮಾಜಿ ಸಂಸದೆ ಸುಷ್ಮೀತಾ ದೇವ್ ಪಕ್ಷಕ್ಕೆ ರಾಜೀನಾಮೆ ನೀಡಿ, ಇಂದು ಪ.ಬ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್ ಗೆ ಸೇರಲಿದ್ದಾರೆ.

- Advertisement -


ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಸಲ್ಲಿಸಿದ್ದಾರೆಂದು ವರದಿಯಾಗಿದೆ.
ಅವರು ಮೂರು ದಶಕಗಳ ಕಾಲ ಕಾಂಗ್ರೆಸ್ ನಲ್ಲಿ ಇದ್ದು, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿಯೂ ಸೇವೆ ಸಲ್ಲಿಸಿದ್ದರು.

ಸುಷ್ಮೀತಾ ದೇವ್ ಅವರ ತಂದೆ ಸಂತೋಷ್ ಮೋಹನ್ ದೇವ್ ಈ ಹಿಂದೆ ಕೇಂದ್ರ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು . ಮತ್ತು ತಾಯಿ ಬಿತಿಕಾ ದೇವ್ ಅವರು ಅಸ್ಸಾಂನಲ್ಲಿ ಶಾಸಕಿಯಾಗಿದ್ದರು.



Join Whatsapp