Home ಟಾಪ್ ಸುದ್ದಿಗಳು ಬಿಜೆಪಿಯಿಂದ ಬ್ರಿಜ್ ಭೂಷಣ್ ಅಮಾನತು ಮಾಡಿ: ಜೈರಾಮ್ ರಮೇಶ್

ಬಿಜೆಪಿಯಿಂದ ಬ್ರಿಜ್ ಭೂಷಣ್ ಅಮಾನತು ಮಾಡಿ: ಜೈರಾಮ್ ರಮೇಶ್

ನವದೆಹಲಿ: ಭಾರತ ಕುಸ್ತಿ ಫೆಡರೇಷನ್ನ (ಡಬ್ಲ್ಯುಎಫ್ಐ) ಮಾಜಿ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಪಕ್ಷದಿಂದ ಅಮಾನತುಗೊಳಿಸುವಂತೆ ಮತ್ತು ಅವರ ಪುತ್ರ ಕರಣ್ ಭೂಷಣ್ ಸಿಂಗ್ಗೆ ನೀಡಿರುವ ಲೋಕಸಭೆ ಟಿಕೆಟ್ ಹಿಂಪಡೆಯುವಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಒತ್ತಾಯಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ಬ್ರಿಜ್ ಭೂಷಣ್ ಸಿಂಗ್ ಪ್ರತಿನಿಧಿಸುತ್ತಿರುವ ಕೈಸರ್ಗಂಜ್ ಕ್ಷೇತ್ರದಿಂದ, ಅವರ ಪುತ್ರ ಕರಣ್ ಭೂಷಣ್ ಸಿಂಗ್ಗೆ ಟಿಕೆಟ್ ನೀಡುವ ಮೂಲಕ ನುಣುಚಿಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದೆ’ ಎಂದು ಆರೋಪಿಸಿದರು.


ಆರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಅವರ ವಿರುದ್ಧ ಆರೋಪಗಳನ್ನು ನಿಗದಿ ಮಾಡುವಂತೆ ದೆಹಲಿ ನ್ಯಾಯಾಲಯ ಆದೇಶಿಸಿದೆ ಎಂದು ಅವರು ಹೇಳಿದರು.

Join Whatsapp
Exit mobile version