ಪ್ರತಾಪ್ ಸಿಂಹರನ್ನು ಕೂಡಲೇ ತನಿಖೆಗೆ ಒಳಪಡಿಸಬೇಕು, ಅಲ್ಲಿಯವರೆಗೂ ಅಮಾನತು ಮಾಡಬೇಕು: ಯತೀಂದ್ರ ಸಿದ್ದರಾಮಯ್ಯ

Prasthutha|

ಮೈಸೂರು: ಸಂಸತ್ ನಲ್ಲಿ ಅಶ್ರುವಾಯು ದಾಳಿ ನಡೆಸಿದ ವ್ಯಕ್ತಿಗಳಿಗೂ ಪ್ರತಾಪ್ ಸಿಂಹರಿಗೂ ಪರಿಚಯವಿರುತ್ತೆ. ಕೂಡಲೇ ಅವರನ್ನು ತನಿಖೆಗೆ ಒಳಪಡಿಸಬೇಕು. ಅಲ್ಲಿಯವರೆಗೂ ಪ್ರತಾಪ್ ಸಿಂಹ ಅವರನ್ನು ಅಮಾನತು ಮಾಡಬೇಕು ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

- Advertisement -

ಪಾರ್ಲಿಮೆಂಟ್ ಮೇಲೆ ದುಷ್ಕರ್ಮಿಗಳ ಅಟ್ಯಾಕ್ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ ಸಂಸತ್ ಮೇಲೆ ನಡೆದಿರುವ ದಾಳಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಸಂಸತ್ ನಲ್ಲಿ ಭದ್ರತಾ ಲೋಪ ಆಗಿದೆ. ಈ ಘಟನೆ ಹಿಂದೆ ಬೇರೆಯ ಹುನ್ನಾರ ಇದೆ. ಸಂಸತ್ ಮೇಲೆ ದಾಳಿ ಮಾಡಿದವರಲ್ಲಿ ಓರ್ವ ಮೈಸೂರಿನವನು. ಸಂಸತ್ ಒಳಗೆ ನುಗ್ಗಿರುವವರು ಸಂಸದ ಪ್ರತಾಪ್ ಸಿಂಹ ಕಚೇರಿಯಿಂದ ಪಾಸ್ ಪಡೆದು ಹೋಗಿದ್ದಾರೆ ಎಂದರು.

ನಾವು ಸಹ ವಿಧಾನಸಭಾ ಅಧಿವೇಶನ ವೀಕ್ಷಣೆಗೆ ಪಾಸ್ ನೀಡುತ್ತೇವೆ. ಪಾಸ್ ನೀಡುವ ವೇಳೆ ಸಂಪೂರ್ಣವಾಗಿ ಪರಿಶೀಲಿಸಿ ನಂತರ ಪಾಸ್ ನೀಡುತ್ತೇವೆ. ಈ ಘಟನೆಗೆ ಪ್ರತಾಪ್ ಸಿಂಹ ಅವರನ್ನೇ ನೇರಹೊಣೆ ಮಾಡಬೇಕು ಎಂದು ಕಿಡಿಕಾರಿದರು.



Join Whatsapp