ರಾಜ್ಯಸಭಾ ಸದಸ್ಯರ ಅಮಾನತು | ವಿಪಕ್ಷ ಸದಸ್ಯರಿಂದ ಪ್ರತಿಭಟನೆ

Prasthutha|

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಮುಂದಿನ ಅವಧಿಗೆ ಅಮಾನತುಗೊಂಡಿರುವ ರಾಜ್ಯಸಭಾ ಸಂಸದರು ಬುಧವಾರ ಬೆಳಿಗ್ಗಿನಿಂದಲೇ ಸಂಸತ್ ಆವರಣದಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆಯ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

- Advertisement -


12 ಸಂಸದರ ಅಮಾನತು ರದ್ದುಗೊಳಿಸುವಂತೆ ಮಾಡಿದ ಮನವಿಯನ್ನು ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ತಿರಸ್ಕರಿಸಿದ ನಂತರ ಉಭಯ ಸದನಗಳು ಮಂಗಳವಾರ ವಿರೋಧ ಪಕ್ಷ ಮತ್ತು ಸರ್ಕಾರದ ನಡುವೆ ವಾಕ್ಸಮರಕ್ಕೆ ಸಾಕ್ಷಿಯಾದವು. ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳ ಸದಸ್ಯರು, ಅಮಾನತನ್ನು ವಿರೋಧಿಸಿ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಸಭಾತ್ಯಾಗ ಮಾಡಿದರು.


ಸದನಕ್ಕೆ ಅಡ್ಡಿಪಡಿಸುವುದಿಲ್ಲ ಮತ್ತು ಬುಧವಾರದ ಕಲಾಪದಲ್ಲಿ ಭಾಗವಹಿಸುತ್ತೇವೆ ಎಂದು ವಿರೋಧ ಪಕ್ಷಗಳು ಹೇಳಿರುವುದರಿಂದ ರಾಜ್ಯಸಭೆಯಲ್ಲಿನ ಬಿಕ್ಕಟ್ಟು ಬುಧವಾರ ಕೊನೆಗೊಳ್ಳುವ ಸಾಧ್ಯತೆಯಿದೆ.
ಈ ವರ್ಷದ ಆಗಸ್ಟ್ ನಲ್ಲಿ ನಡೆದ ಮುಂಗಾರು ಅಧಿವೇಶನದಲ್ಲಿ ಅಶಿಸ್ತಿನ ನಡವಳಿಕೆಗಾಗಿ ಸಂಸದರನ್ನು ಅಮಾನತುಗೊಳಿಸಲಾಗಿದೆ.

Join Whatsapp