ಮಂಗಳೂರು: ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ, ಬೆಚ್ಚಿಬಿದ್ದ ಸ್ಥಳೀಯರು!

Prasthutha|

ಮಂಗಳೂರು: ಮಂಗಳೂರಿನ ನಾಗುರಿಯಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಡ ಸ್ಫೋಟ ಸಂಭವಿಸಿ ಆಟೋದಲ್ಲಿದ್ದ ಪ್ರಯಾಣಿಕ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

- Advertisement -

ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಹಾಗೂ ವಿಧಿವಿಜ್ಞಾನ ತಜ್ಞರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಘಟನೆ ಕುರಿತಂತೆ ಮಾಹಿತಿ ನೀಡಿರುವ ಶಶಿಕುಮಾರ್ ಅವರು, ಪ್ರಯಾಣಿಕನನ್ನು ಕರೆದೊಯ್ಯುತ್ತಿದ್ದ ಆಟೋದಲ್ಲಿ ಸ್ಫೋಟ ಸಂಭವಿಸಿದೆ. ಪ್ರಯಾಣಿಕನ ಬಳಿ ಬ್ಯಾಗ್ ಇತ್ತು. ಈ ಸಂಬಂಧ ಪರಿಶೀಲನೆ ನಡೆಸಲಾಗುತ್ತಿದೆ.

- Advertisement -

ಸ್ಫೋಟದಿಂದಾಗಿ ಆಟೋ ಚಾಲಕ ಹಾಗೂ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ಬಗ್ಗೆ ಸಾರ್ವಜನಿಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಆಟೋದಲ್ಲಿ ಕುಕ್ಕರ್ ಕೂಡ ಪತ್ತೆಯಾಗಿರುವುದರಿಂದ ಹಲವು ಅನುಮಾನಗಳಿಗೆ ಕಾರಣವಾಗಿದೆ.

Join Whatsapp