ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ರೇವದಂಡ ಕರಾವಳಿಯ ಬಳಿ ಅನುಮಾನಾಸ್ಪದ ದೋಣಿಯೊಂದು ಪತ್ತೆಯಾಗಿದ್ದು ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ರೇವದಂಡದ ಕೊರ್ಲೈ ಕರಾವಳಿಯಿಂದ ಎರಡು ನಾಟಿಕಲ್ ಮೈಲುಗಳ ದೂರದಲ್ಲಿ ಭದ್ರತಾ ಸಿಬ್ಬಂದಿ ದೋಣಿಯನ್ನು ನೋಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪತ್ತೆಯಾದ ದೋಣಿ ಬೇರೆ ದೇಶದ ಗುರುತುಗಳನ್ನು ಹೊಂದಿದ್ದು ರಾಯಗಢ ಕರಾವಳಿಗೆ ತೇಲಿ ಹೋಗಿರಬಹುದು ಎಂದು ಅವರು ಹೇಳಿದರು.
ಹೈ ಅಲರ್ಟ್ ಘೋಷಣೆಯಾದ ಬೆನ್ನಲ್ಲೇ ರಾಯಗಢ ಪೊಲೀಸ್, ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ (ಬಿಡಿಡಿಎಸ್), ತ್ವರಿತ ಪ್ರತಿಕ್ರಿಯೆ ತಂಡ (ಕ್ಯೂಆರ್‌ಟಿ), ನೌಕಾಪಡೆ ಮತ್ತು ಕರಾವಳಿ ಕಾವಲು ಪಡೆಗಳ ತಂಡಗಳು ಸ್ಥಳಕ್ಕೆ ಧಾವಿಸಿವೆ.
