ಮಧ್ಯಪ್ರದೇಶ: ಟ್ರಕ್ ಕಾರು ನಡುವೆ ಭೀಕರ ಅಪಘಾತ : 6 ಮಂದಿ ಸ್ಥಳದಲ್ಲೇ ಮೃತ್ಯು

Prasthutha|

ಮಧ್ಯಪ್ರದೇಶ: ಟ್ರಕ್ ಹಾಗೂ ಎಸ್‌ಯುವಿ ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಸಾಗರ್ ಬಳಿ ಸಂಭವಿಸಿದೆ.

- Advertisement -

ಸನೋಧಾ ಪೊಲೀಸ್ ಠಾಣೆ ವ್ಯಾಪ್ತಿಯ ಸಾಗರ್-ಜಬಲ್‌ಪುರ ರಸ್ತೆಯ ಬಮೋರಿ ದೂದರ್ ಬಳಿ ಈ ಘಟನೆ ನಡೆದಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಒಪಿ) ಅಶೋಕ ಚೌರಾಸಿಯಾ ತಿಳಿಸಿದ್ದಾರೆ.

ಪೊಲೀಸರ ಮಾಹಿತಿಯಂತೆ ಎಸ್‌ಯುವಿಯಲ್ಲಿ ಪ್ರಯಾಣಿಸುತ್ತಿದ್ದ ಏಳು ಜನರಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.

- Advertisement -

ಮೃತರ ಗುರುತು ಪತ್ತೆಹಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp