ರಾಜ್ಯದಲ್ಲಿ ಮತ್ತೆ ಶುರುವಾಗಲಿದೆ ಶುಚಿ ಯೋಜನೆ

Prasthutha|

ಬೆಂಗಳೂರು: ಕರ್ನಾಟಕದ ಅನುದಾನಿತ ಹಾಗೂ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಿಸುವ ಶುಚಿ ಯೋಜನೆಯು ಮತ್ತೆ ಮರು ಆರಂಭವಾಗಲಿದೆ.

- Advertisement -

ಈ ಯೋಜನೆ ಆರಂಭಗೊಳ್ಳುತ್ತಿರುವ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಶುಚಿ ಯೋಜನೆ ಆರಂಭಗೊಳ್ಳಲು ಬೇಕಾದ ಸಿದ್ಧತೆಗಳೆಲ್ಲವೂ ನಡೆದಿದ್ದು, ಸೆಪ್ಟೆಂಬರ್ನಿಂದ ಈ ಯೋಜನೆ ಜಾರಿಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಪದವಿಪೂರ್ವ ಶಿಕ್ಷಣದ ವರೆಗಿನ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್ ವಿತರಿಸುವ ಯೋಜನೆ ಇದಾಗಿದೆ. ಈ ಶುಚಿ ಯೋಜನೆ 2013- 2014ರಲ್ಲಿ ಪ್ರಾರಂಭಗೊಂಡಿತ್ತು. ಆದ್ರೆ, ಕೊರೋನಾ ಸಮಯದಲ್ಲಿ ಈ ಯೋಜನೆ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಕರ್ನಾಟಕದಲ್ಲಿ ಶುಚಿ ಯೋಜನೆಗೆ ಮತ್ತೆ ಚಾಲನೆ ದೊರೆತಿದೆ.

Join Whatsapp