‘ಸ್ವದೇಸ್’ ನಟಿ ಗಾಯತ್ರಿ ಜೋಶಿ ಕಾರು ಅಪಘಾತ: ಇಬ್ಬರು ಮೃತ್ಯು

Prasthutha|

ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ಸ್ವದೇಶ್ ಚಿತ್ರದಲ್ಲಿನ ಪಾತ್ರಕ್ಕಾಗಿ ಹೆಸರುವಾಸಿಯಾದ ನಟಿ ಗಾಯತ್ರಿ ಜೋಶಿ ಇಟಲಿಯಲ್ಲಿ ಕಾರು ಅಪಘಾತಕ್ಕೊಳಗಾಗಿದ್ದಾರೆ.

- Advertisement -


ಭೀಕರ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.


ಈ ಅಪಘಾತ ದೊಡ್ಡ ಮಟ್ಟದಲ್ಲಿ ಸಂಭವಿಸಿದ್ದು, ವೃದ್ಧ ದಂಪತಿ ಕೊನೆಯುಸಿರೆಳೆದಿದ್ದಾರೆ. ಮೃತರು ಹೊರದೇಶದವರು. ಭಾರತೀಯ ಚಿತ್ರರಂಗದಲ್ಲಿ ಕೆಲ ಕಾಲ ಗುರುತಿಸಿಕೊಂಡಿದ್ದ ನಟಿ ಗಾಯತ್ರಿ ಜೋಶಿ ಹಾಗೂ ಅವರ ಪತಿ ವಿಕಾಸ್ ಒಬೆರಾಯ್ ಅವರು ಸುರಕ್ಷಿತವಾಗಿದ್ದಾರೆ. ಅದೃಷ್ಟವಶಾತ್, ದಂಪತಿಗೆ ಯಾವುದೇ ಹಾನಿ ಸಂಭವಿಸಿಲ್ಲ ಎಂಬುದು ಖಚಿತವಾಗಿದೆ. ಮಾಹಿತಿ ತಿಳಿಸಿದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

- Advertisement -