Home ಟಾಪ್ ಸುದ್ದಿಗಳು ಸಮಾಜವಾದಿ ಪಕ್ಷಕ್ಕೆ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ

ಸಮಾಜವಾದಿ ಪಕ್ಷಕ್ಕೆ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ

ಸ್ವಾಮಿ ಪ್ರಸಾದ್ ಮೌರ್ಯ ಮಂಗಳವಾರ ಸಮಾಜವಾದಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ಉತ್ತರ ಪ್ರದೇಶ ವಿಧಾನ ಪರಿಷತ್ತಿಗೆ ರಾಜೀನಾಮೆ ನೀಡಿದ್ದಾರೆ.


ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗಿನ ಭಿನ್ನಾಭಿಪ್ರಾಯದ ಕಾರಣದಿಂದ ಸ್ವಾಮಿ ಪ್ರಸಾದ್ ಮೌರ್ಯ ಪಕ್ಷ ತೊರೆದಿದ್ದಾರೆ.

ಅವರು ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಪತ್ರವನ್ನು ಪೋಸ್ಟ್ ಮಾಡಿದ್ದಾರೆ. ನನಗೆ ಸ್ವಚ್ಛ ರಾಜಕಾರಣದಲ್ಲಿ ನಂಬಿಕೆ ಇದೆ, ನಾನು ಅಖಿಲೇಶ್ ಯಾದವ್ ಅವರನ್ನು ನೋಡಿದ್ದೇನೆ, ಅವರು ಸಮಾಜವಾದಿ ಸಿದ್ಧಾಂತಕ್ಕೆ ವಿರುದ್ಧವಾಗಿದ್ದರು. ಮುಲಾಯಂ ಸಿಂಗ್ ಅವರೊಂದಿಗೆ ಕೆಲಸ ಮಾಡಿದ ಅನುಭವವೂ ನನಗೆ ಇದೆ. ಅವರು ಕಟ್ಟಾ ಸಮಾಜವಾದಿ ನಾಯಕರಾಗಿದ್ದರು ಎಂದು ಮೌರ್ಯ ಹೇಳಿದ್ದಾರೆ. ಕಳೆದ ವಾರ ಸಮಾಜವಾದಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸ್ವಾಮಿ ಪ್ರಸಾದ್ ಮೌರ್ಯ ಲೋಕಸಭೆ ಚುನಾವಣೆಗೂ ಮುನ್ನ ಹೊಸ ಪಕ್ಷವನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Join Whatsapp
Exit mobile version