ಬೆಂಗಳೂರು: ಇಲ್ಲಿನ ಕಂಟೋನ್ಮೆಂಟ್ ರೈಲ್ವೇ ನಿಲ್ದಾಣದಲ್ಲಿ ಕುಸಿದು ಬಿದ್ದು ಯಾದಗಿರಿ ಜಿಲ್ಲೆಯ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ನಿಧನ ಹೊಂದಿದ್ದಾರೆ.
ಅವರು ಜನವರಿ 11ರಂದು ಬೆಂಗಳೂರಿನಿಂದ ಯಾದಗಿರಿಗೆ ಹಿಂದಿರುಗುವಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನಲಾಗಿದೆ.
ಮುಂದಿನ ತಿಂಗಳು ನಡೆಯಲಿರುವ ತಮ್ಮ 25ನೇ ಪಟ್ಟಾಧಿಕಾರ ಮಹೋತ್ಸವಕ್ಕೆ ಗಣ್ಯರನ್ನು ಆಹ್ವಾನ ಮಾಡಲು ಬೆಂಗಳೂರಿಗೆ ಆಗಮಿಸಿದ್ದ ಅವರು ಯಾದಗಿರಿಗೆ ಹಿಂತಿರುಗುವಾಗ ಈ ಘಟನೆ ನಡೆದಿದೆ. ದಿಢೀರ್ ಕುಸಿದು ಬಿದ್ದ ಸ್ವಾಮೀಜಿಯನ್ನು ಭಕ್ತರು ಕೂಡಲೇ ಆಸ್ಪತ್ರೆಗೆ ಸಾಗಿಸುವಾಗ ಅವರು ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.