ಮುಂಬೈ: ಇಲ್ಲಿನ ಗುರುಗ್ರಾಮ್ ನಲ್ಲಿ ಮುಸ್ಲಿಮರು ನಡೆಸುತ್ತಿದ್ದ ಶುಕ್ರವಾರದ ಪ್ರಾರ್ಥನೆಯನ್ನು ತಡೆದ ಸಂಘಪರಿವಾರದ ಕಾರ್ಯಕರ್ತರ ಕ್ರಮವನ್ನು ಬಾಲಿವುಡ್ ನಟಿ ಸ್ವರ ಭಾಸ್ಕರ್ ಖಂಡಿಸಿದ್ದು, ಸ್ವರಾ ಅವರು “ನಾನು ಹಿಂದೂವಾಗಿ ನಾಚಿಕೆಪಡುತ್ತೇನೆ” ಎಂದು ಟ್ವಿಟ್ಟರ್ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.
ಸಂಘ ಪರಿವಾರದ ಕಾರ್ಯಕರ್ತರು ಈದ್ಗಾ ಮೈದಾನವೊಂದರಲ್ಲಿ ಶುಕ್ರವಾರದ ಪ್ರಾರ್ಥನೆ ನಡೆಸುತ್ತಿದ್ದ ಮುಸ್ಲಿಮರ ಮೇಲೆ ದಾಳಿ ನಡೆಸಿದ್ದರು. ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಬಂದ ಗುಂಪೊಂದು ಬೊಬ್ಬೆ ಹಾಕುತ್ತಾ ಪ್ರಾರ್ಥನೆಗೆ ಅಡ್ಡಿಪಡಿಸಿದ್ದರು.
ಈ ಹಿಂದೆ ಶಾರೂಖ್ ಖಾನ್ ಬೆಂಬಲಕ್ಕೆ ನಿಂತ ಸ್ವರ ವಿರುದ್ಧ ಸಂಘಪರಿವಾರ ದ್ವೇಷದ ಅಭಿಯಾನವೇ ನಡೆಸಿತ್ತು.