Home ಟಾಪ್ ಸುದ್ದಿಗಳು ಸ್ವಾತಿ ಮೇಲೆ ಹಲ್ಲೆ ಪ್ರಕರಣ: ಎಸ್ ಐಟಿ ರಚಿಸಿದ ದೆಹಲಿ ಪೊಲೀಸರು

ಸ್ವಾತಿ ಮೇಲೆ ಹಲ್ಲೆ ಪ್ರಕರಣ: ಎಸ್ ಐಟಿ ರಚಿಸಿದ ದೆಹಲಿ ಪೊಲೀಸರು

ನವದೆಹಲಿ: ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ದೆಹಲಿ ಪೊಲೀಸರ ವಿಶೇಷ ತನಿಖಾ ತಂಡ(ಎಸ್ ಐಟಿ) ರಚನೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ಅವರ ಮನೆಗೆ ತೆರಳಿದ್ದ ವೇಳೆ ಮಾಲಿವಾಲ್ ಮೇಲೆ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿತ್ತು. ಇತ್ತೀಚೆಗೆ ಬಿಭವ್ ಕುಮಾರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.


ಉತ್ತರ ದೆಹಲಿಯ ಹೆಚ್ಚುವರಿ ಡಿಸಿಪಿ ಅಂಜಿತಾ ಚೆಪ್ಯಾಲಾ ಅವರು ಎಸ್ಐಟಿ ನೇತೃತ್ವವಹಿಸಿದ್ದಾರೆ.

Join Whatsapp
Exit mobile version