ನಾಸೀರ್ ಹುಸೇನ್ ಕ್ಷಮೆ ಕೇಳುವವರೆಗೂ ಪ್ರಮಾಣ ವಚನಕ್ಕೆ ಅವಕಾಶ ನೀಡಬಾರದು: ಜೋಶಿ

Prasthutha|

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿ ಕಾಂಗ್ರೆಸ್’ಗೆ ಹತ್ತಿರದವನು. ನಾಸೀರ್ ಹುಸೇನ್ ಸಾರ್ವಜನಿಕವಾಗಿ ಕ್ಷಮೆ ಕೇಳುವವರೆಗೂ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಬಾರದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.

- Advertisement -


ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಸೀರ್ ಹುಸೇನ್ ಅವರು ತಮ್ಮ ಬೆಂಬಲಿಗನನ್ನು ಒಳಗೆ ಕರೆದುಕೊಂಡು ಬಂದು, ಪಾಕಿಸ್ತಾನ ಪರ ಘೋಷಣೆ ಕೂಗುವಂತೆ ಮಾಡಿದ್ದಾರೆ. ಸೌಜನ್ಯಕ್ಕಾದರೂ ಅವರು ಕ್ಷಮೆ ಕೇಳಬೇಕಿತ್ತು. ಅದನ್ನು ಬಿಟ್ಟು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಕಿಡಿಕಾರಿದರು.



Join Whatsapp