ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿ ಕಾಂಗ್ರೆಸ್’ಗೆ ಹತ್ತಿರದವನು. ನಾಸೀರ್ ಹುಸೇನ್ ಸಾರ್ವಜನಿಕವಾಗಿ ಕ್ಷಮೆ ಕೇಳುವವರೆಗೂ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಬಾರದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.
ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಸೀರ್ ಹುಸೇನ್ ಅವರು ತಮ್ಮ ಬೆಂಬಲಿಗನನ್ನು ಒಳಗೆ ಕರೆದುಕೊಂಡು ಬಂದು, ಪಾಕಿಸ್ತಾನ ಪರ ಘೋಷಣೆ ಕೂಗುವಂತೆ ಮಾಡಿದ್ದಾರೆ. ಸೌಜನ್ಯಕ್ಕಾದರೂ ಅವರು ಕ್ಷಮೆ ಕೇಳಬೇಕಿತ್ತು. ಅದನ್ನು ಬಿಟ್ಟು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಕಿಡಿಕಾರಿದರು.