ವಾಹನ ಸವಾರರಿಗೆ ಸಿಹಿ ಸುದ್ದಿ: ಈ ರಾಜ್ಯದಲ್ಲಿ ಲೀಟರ್ ಪೆಟ್ರೋಲ್ ಬೆಲೆ 3ರೂ ಇಳಿಕೆ

Prasthutha|

ಚೆನ್ನೈ: ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ ಗೆ 3 ರೂಪಾಯಿ ಕಡಿಮೆ ಮಾಡಲಾಗುವುದು ಎಂದು ತಮಿಳುನಾಡು ಹಣಕಾಸು ಮತ್ತು ಮಾನವ ಸಂಪನ್ಮೂಲ ಸಚಿವ ಪಿಟಿಆರ್ ಪಳನಿವೇಲ್ ತ್ಯಾಗರಾಜನ್ ತಮ್ಮ ಬಜೆಟ್ ನಲ್ಲಿ ಹೇಳಿದ್ದಾರೆ. ತಮಿಳುನಾಡು ವಿಧಾನಸಭೆಯ ಇತಿಹಾಸದಲ್ಲಿ ಮೊದಲ ಕಾಗದ ರಹಿತ ಬಜೆಟ್ ಅಧಿವೇಶನ ಇಂದು ಚೆನ್ನೈನ ಕಲೈವನಾರ್ ಆರಂಗಂನಲ್ಲಿ ನಡೆಯಿತು. ಈ ವರ್ಷದ ಮೇನಲ್ಲಿ ಅಧಿಕಾರಕ್ಕೆ ಬಂದ ನಂತರ ಇದು ಡಿಎಂಕೆ ಸರ್ಕಾರದ ಚೊಚ್ಚಲ ಬಜೆಟ್ ಅಧಿವೇಶನವಾಗಿದೆ.

- Advertisement -

ಸಚಿವ ಪಿಟಿಆರ್ ಪಳನಿವೇಲ್ ತ್ಯಾಗರಾಜನ್ ಅವರು 2021-22ರ ಆರ್ಥಿಕ ವರ್ಷದ ಪರಿಷ್ಕೃತ ಬಜೆಟ್ ವೇಳೆ ರಾಜ್ಯದ ಹಣಕಾಸು ಕುರಿತು ‘ಶ್ವೇತ ಪತ್ರ’ ವರದಿಯನ್ನು ಪ್ರಕಟಿಸಿದರು. ಒಂದೆರಡು ದಿನಗಳ ಹಿಂದೆ ತ್ಯಾಗರಾಜನ್ ಅವರು ತಮ್ಮ ವರದಿಯಲ್ಲಿ ರಾಜ್ಯದ ಹಣಕಾಸು ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂದು ಹೇಳಿದ್ದರು. ನಂತರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿಎಂಕೆ ಅವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದ ಎಲ್ಲಾ ಕಲ್ಯಾಣ ಯೋಜನೆಗಳನ್ನು ನೀಡುವುದನ್ನು ಖಚಿತಪಡಿಸುತ್ತದೆ ಎಂದು ಹೇಳಿದ್ದಾರೆ.

- Advertisement -

Join Whatsapp