ಟಿ20 ವಿಶ್ವಕಪ್‌ | ಸೆಮಿಫೈನಲ್ ಪ್ರವೇಶಿಸಿದ ಟೀಮ್ ಇಂಡಿಯಾ

Prasthutha|

- Advertisement -

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸಿದೆ.
ಭಾನುವಾರ ನಡೆದ ನೆದರ್ಲ್ಯಾಂಡ್ಸ್ – ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಪಂದ್ಯದಲ್ಲಿ ಹರಿಣಗಳನ್ನು 13 ರನ್‌ಗಳ ಅಂತರದಿಂದ ಮಣಿಸುವಲ್ಲಿ ಡಚ್ ಪಡೆ ಯಶಸ್ವಿಯಾಗಿದೆ.

ಈ ಸೋಲಿನೊಂದಿಗೆ ದಕ್ಷಿಣ ಆಫ್ರಿಕಾದ ವಿಶ್ವಕಪ್ ಪಯಣವು ಅಂತ್ಯಗೊಂಡಿದೆ.
ಮತ್ತೊಂದೆಡೆ ಗ್ರೂಪ್ -1 ರಲ್ಲಿ ಅಗ್ರಸ್ಥಾನವನ್ನು ಹೊಂದಿರುವ ಭಾರತ ಸೆಮಿಫೈನಲ್ ಪ್ರವೇಶಿಸಿದೆ.
ಭಾನುವಾರ ನಡೆಯುವ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ-ಬಾಂಗ್ಲಾದೇಶ ತಂಡಗಳು ಮುಖಾಮುಖಿ ಆಗಲಿವೆ. ಈ ಪಂದ್ಯದ ವಿಜೇತರು ಎರಡನೇ ತಂಡವಾಗಿ ಸೆಮಿಫೈನಲ್ ಪ್ರವೇಶಿಸಲಿದ್ದಾರೆ.

Join Whatsapp